ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು ಮತ್ತು ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಘಟಕವಾರು ಮತ್ತು ವರ್ಗವಾರು ವಿವರ: 50 ಟನ್ ಐಸ್ ಪ್ಲಾಂಟ್ ಸ್ಥಾವರ ನಿರ್ಮಾಣ (ಸಾಮಾನ್ಯ -1), ಶಾಖ ನಿರೋಧಕ ವಾಹನ (ಸಾಮಾನ್ಯ -2, ಮಹಿಳೆ-5), ರೆಪ್ರಿಜರೇಟೆಡ್ ವಾಹನ (ಸಾಮಾನ್ಯ-3, ಮಹಿಳೆ-5), ಆಳ ಸಮುದ್ರ ಬೋಟ್ ನಿರ್ಮಾಣ (ಮಹಿಳೆ-1), ಉಪ್ಪು ನೀರಿನ 0.1 ಹೆ ಬಯೋಫ್ಲಾಕ್ ಘಟಕ ನಿರ್ಮಾಣ (ಮಹಿಳೆ-3).
ಆಸಕ್ತರು ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…