ಉಡುಪಿ: ಕೇಂದ್ರ ಸರಕಾರದ ಮಹತ್ವದ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಯೋಜನೆಯಲ್ಲಿ 4447 ಮಂದಿ ಈಗಾಗಲೇ ನೊಂದಾಯಿಸಿಕೊಂಡಿದ್ದಾರೆ. 827 ಫಲಾನುಭವಿಗಳನ್ನು ಸರಬರಾಜು ಕಂಎನಿ ಆಯ್ಕೆ ಮಾಡಿಕೊಂಡಿದ್ದು, 378 ಮಂದಿಗೆ ಅವರ ಮನೆಯ ತಾರಸಿ ಮೇಲೆ ಸೋಲಾರ್ ಫ್ಯಾನಲ್ ಅಳವಡಿಸಿ ಸಂಪರ್ಕ ನೀಡಲಾಗಿದೆ ಎಂದು ಸಂಸದರ ಕಚೇರಿ ಪ್ರಕಟಣೆ ಮಾಹಿತಿ ನೀಡಿದೆ.
ಒಬ್ಬ ಫಲಾನುಭವಿಗೆ 300ಕ್ಕೂ ಮಿಕ್ಕಿ ಯೂನಿಟ್ ವಿದ್ಯುತ್ ಒದಗಿಸುವ ದೃಷ್ಟಿಯಿಂದ 2,06,000 ರೂ. ಸಾಲ ಸೌಲಭ್ಯ ವನ್ನು ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಒದಗಿಸಲಾಗುತ್ತದೆ. ಆ ಪೈಕಿ 78,000ರೂ.ಗಳನ್ನು ಕೇಂದ್ರ ಸರಕಾರ ಸಬ್ಸಿಡಿ ರೂಪದಲ್ಲಿ ಒದಗಿಸುತ್ತಿದೆ. ಉಡುಪಿ ಜಿಲ್ಲೆಗೆ ಈಗಾಗಲೇ 299 ಫಲಾನುಭವಿಗಳ ಖಾತೆಗೆ ಸಬ್ಸಿಡಿ ಬಂದಿದೆ ಎಂದು ಸಂಸದರ ಹೇಳಿಕೆ ತಿಳಿಸಿದೆ.
ಹಾಲಿವರ್ಷ ಸೂರ್ಯ ಘರ್ ಯೋಜನೆಯ ಮೂಲಕ 1 ಕೋಟಿ ಕುಟುಂಬಗಳಿಗೆ ಸೋಲಾರ್ ವಿದ್ಯುತ್ ಅಳವಡಿಸುವ ಯೋಜನೆಯ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ. ಬ್ಯಾಂಕ್ ಸಾಲ ಪಡೆದು ಕೇವಲ ಒಂದು ತಿಂಗಳೊಳಗೆ ಕೇಂದ್ರ ಸರ್ಕಾರದ ಮೂಲಕ ಫಲಾನುಭವಿಗಳ ಖಾತೆಗೆ ಸಬ್ಸಿಡಿ ಒದಗಿಸಿದ್ದು ಈ ಯೋಜನೆಯ ವಿಶೇಷವಾಗಿದೆ ಎಂದವರು ಹೇಳಿದ್ದಾರೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…