ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ʻಸೆಂಟ್ರಲ್ ವಿಸ್ಟಾʼ ಯೋಜನೆಯ ಭಾಗವಾಗಿ ನಿರ್ಮಿಸಲಾದ ʻಸೇವಾ ತೀರ್ಥʼ ಸಂಕೀರ್ಣವನ್ನ ಪ್ರಧಾನಿ ನರೇಂದ್ರ ಮೋದಿ ಅವರಿಂದು ಅನಾವರಣಗೊಳಿಸಲಿದ್ದಾರೆ. ಶೀಘ್ರದಲ್ಲೇ ಪ್ರಧಾನಿಗಳ ಕಚೇರಿಯನ್ನ ಇದೇ ಸಂಕೀರ್ಣದ ಕಚೇರಿಗೆ ಸ್ಥಳಾಂತರಿಸಲಾಗುತ್ತದೆ. 1947 ರ ಬಳಿಕ ಅಂದ್ರೆ ಸ್ವತಂತ್ರ ಭಾರತದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಗಳ ಕಚೇರಿ ಬದಲಾವಣೆ ಮಾಡುತ್ತಿರುವುದು ಗಮನಾರ್ಹ.
ʻಸೇವಾ ತೀರ್ಥʼ, ಕರ್ತವ್ಯ ಭವನ -1 ಮತ್ತು 2 ಅನ್ನು ಔಪಚಾರಿಕವಾಗಿ ಉದ್ಘಾಟಿಸಲಾಗುತ್ತಿದೆ. ಮಧ್ಯಾಹ್ನ 1:30 ಕ್ಕೆ ʻಸೇವಾ ತೀರ್ಥʼ ಹೆಸರನ್ನ ಅನಾವರಣಗೊಳಿಸಲಿದ್ದಾರೆ. ಸಂಜೆ 6 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದ್ದು, ಸಾರ್ವಜನಿಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.
ಹೊಸ ಕಟ್ಟಡವು ಪ್ರಧಾನಿಗಳ ಕಚೇರಿ, ಕ್ಯಾಬಿನೆಟ್ ಸಚಿವಾಲಯ ಹಾಗೂ ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ (NSCS) ಕಚೇರಿಗಳನ್ನ ಒಳಗೊಂಡಿರಲಿದೆ. ಇವೆಲ್ಲವೂ ಈ ಹಿಂದೆ ಪ್ರತ್ಯೇಕ ಸ್ಥಳಗಳಲ್ಲಿ ನಿರ್ಮಾಣವಾಗಿದ್ದವು.
ಇದನ್ನೂ ಓದಿ:
ಪ್ರಧಾನಿಗಳ ಹೊಸ ಕಚೇರಿಗೆ ʻಸೇವೆʼ ಎಂಬ ವಸ್ತುವಿಷಯವನ್ನಾಧರಿಸಿ ʻಸೇವಾ ತೀರ್ಥ-1ʼ ಎಂದು ನಾಮಕರಣ ಮಾಡಲಾಗಿದೆ. ಜೊತೆಗೆ ಸೇವೆಯ ಮಹತ್ವವನ್ನ ಬಿಂಬಿಸುವ ಆಧುನಿಕ ಕಾರ್ಯಕ್ಷೇತ್ರಗಳು ಹಾಗೂ ಭವ್ಯ ಸಮಾರಂಭ ಕೊಠಡಿಗಳನ್ನೂ ಒಳಗೊಂಡಿದೆ. ಇನ್ನೂ ಕ್ಯಾಬಿನೆಟ್ ಸಚಿವಾಲಯಕ್ಕೆ ನಿರ್ಮಿಸಲಾದ ಕಚೇರಿಗೆ ʻಸೇವಾ ತೀರ್ಥ -2ʼ, ರಾಷ್ಟ್ರೀಯ ಭದ್ರತಾ ಸಲಹೆಗಾರರ ಕಚೇರಿಗೆ ʻಸೇವಾ ತೀರ್ಥ-3ʼ ಎಂದು ನಾಮಕರಣ ಮಾಡಲಾಗಿದೆ.
ಪ್ರಧಾನಿಗಳ ಕಚೇರಿಯನ್ನೊಳಗೊಂಡ ಸಂಪೂರ್ಣ ʻಸೇವಾ ತೀರ್ಥʼ ಸಂಕೀರ್ಣವನ್ನ 1,189 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದರ ಒಟ್ಟು ವಿಸ್ತೀರ್ಣ 2,26,203 ಚದರ ಅಡಿ ಇದೆ. ಇನ್ನೂ ಪ್ರಧಾನ ಮಂತ್ರಿಯವರ ಹೊಸ ಅಧಿಕೃತ ನಿವಾಸವನ್ನ ʻಕಾರ್ಯನಿರ್ವಾಹಕ ಎನ್‌ಕ್ಲೇವ್ ಭಾಗ 2ʼ ಎಂದು ಹೆಸರಿಸಲಾಗಿದೆ.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…