Featured

ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ – vishwanews24

ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ

1947 ರ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಗಳ ಕಚೇರಿ ಬದಲಾವಣೆ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ʻಸೆಂಟ್ರಲ್‌ ವಿಸ್ಟಾʼ ಯೋಜನೆಯ ಭಾಗವಾಗಿ ನಿರ್ಮಿಸಲಾದ ʻಸೇವಾ ತೀರ್ಥʼ ಸಂಕೀರ್ಣವನ್ನ ಪ್ರಧಾನಿ ನರೇಂದ್ರ ಮೋದಿ ಅವರಿಂದು ಅನಾವರಣಗೊಳಿಸಲಿದ್ದಾರೆ. ಶೀಘ್ರದಲ್ಲೇ ಪ್ರಧಾನಿಗಳ ಕಚೇರಿಯನ್ನ ಇದೇ ಸಂಕೀರ್ಣದ ಕಚೇರಿಗೆ ಸ್ಥಳಾಂತರಿಸಲಾಗುತ್ತದೆ. 1947 ರ ಬಳಿಕ ಅಂದ್ರೆ ಸ್ವತಂತ್ರ ಭಾರತದಲ್ಲಿ ಇದೇ ಮೊದಲ ಬಾರಿಗೆ ಪ್ರಧಾನಿಗಳ ಕಚೇರಿ ಬದಲಾವಣೆ ಮಾಡುತ್ತಿರುವುದು ಗಮನಾರ್ಹ.

ʻಸೇವಾ ತೀರ್ಥʼ, ಕರ್ತವ್ಯ ಭವನ -1 ಮತ್ತು 2 ಅನ್ನು ಔಪಚಾರಿಕವಾಗಿ ಉದ್ಘಾಟಿಸಲಾಗುತ್ತಿದೆ. ಮಧ್ಯಾಹ್ನ 1:30 ಕ್ಕೆ ʻಸೇವಾ ತೀರ್ಥʼ ಹೆಸರನ್ನ ಅನಾವರಣಗೊಳಿಸಲಿದ್ದಾರೆ. ಸಂಜೆ 6 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದ್ದು, ಸಾರ್ವಜನಿಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ಹೊಸ ಕಟ್ಟಡವು ಪ್ರಧಾನಿಗಳ ಕಚೇರಿ, ಕ್ಯಾಬಿನೆಟ್‌ ಸಚಿವಾಲಯ ಹಾಗೂ ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ (NSCS) ಕಚೇರಿಗಳನ್ನ ಒಳಗೊಂಡಿರಲಿದೆ. ಇವೆಲ್ಲವೂ ಈ ಹಿಂದೆ ಪ್ರತ್ಯೇಕ ಸ್ಥಳಗಳಲ್ಲಿ ನಿರ್ಮಾಣವಾಗಿದ್ದವು.

ಇದನ್ನೂ ಓದಿ: 

 

ಪ್ರಧಾನಿಗಳ ಹೊಸ ಕಚೇರಿಗೆ ʻಸೇವೆʼ ಎಂಬ ವಸ್ತುವಿಷಯವನ್ನಾಧರಿಸಿ ʻಸೇವಾ ತೀರ್ಥ-1ʼ ಎಂದು ನಾಮಕರಣ ಮಾಡಲಾಗಿದೆ. ಜೊತೆಗೆ ಸೇವೆಯ ಮಹತ್ವವನ್ನ ಬಿಂಬಿಸುವ ಆಧುನಿಕ ಕಾರ್ಯಕ್ಷೇತ್ರಗಳು ಹಾಗೂ ಭವ್ಯ ಸಮಾರಂಭ ಕೊಠಡಿಗಳನ್ನೂ ಒಳಗೊಂಡಿದೆ. ಇನ್ನೂ ಕ್ಯಾಬಿನೆಟ್ ಸಚಿವಾಲಯಕ್ಕೆ ನಿರ್ಮಿಸಲಾದ ಕಚೇರಿಗೆ ʻಸೇವಾ ತೀರ್ಥ -2ʼ, ರಾಷ್ಟ್ರೀಯ ಭದ್ರತಾ ಸಲಹೆಗಾರರ ಕಚೇರಿಗೆ ʻಸೇವಾ ತೀರ್ಥ-3ʼ ಎಂದು ನಾಮಕರಣ ಮಾಡಲಾಗಿದೆ.

ಪ್ರಧಾನಿಗಳ ಕಚೇರಿಯನ್ನೊಳಗೊಂಡ ಸಂಪೂರ್ಣ ʻಸೇವಾ ತೀರ್ಥʼ ಸಂಕೀರ್ಣವನ್ನ 1,189 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದರ ಒಟ್ಟು ವಿಸ್ತೀರ್ಣ 2,26,203 ಚದರ ಅಡಿ ಇದೆ. ಇನ್ನೂ ಪ್ರಧಾನ ಮಂತ್ರಿಯವರ ಹೊಸ ಅಧಿಕೃತ ನಿವಾಸವನ್ನ ʻಕಾರ್ಯನಿರ್ವಾಹಕ ಎನ್‌ಕ್ಲೇವ್ ಭಾಗ 2ʼ ಎಂದು ಹೆಸರಿಸಲಾಗಿದೆ.

ಇದನ್ನೂ ಓದಿ: 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

2 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

6 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago