Featured

ಪ್ರಧಾನಿಯವರಿಗೆ ದೇಶದ ಬಗ್ಗೆ ಕಾಳಜಿ ಇಲ್ಲ , ಕರೊನಾದಿಂದ ರಕ್ಷಣೆ ಮಾಡಿಕೊಳ್ಳುವುದು ಈಗ ನಿಮ್ಮದೇ ಕೈಯಲ್ಲಿದೆ :  ರಾಹುಲ್​ ಗಾಂಧಿ -Vishwanews24

ಪ್ರಧಾನಿಯವರಿಗೆ ದೇಶದ ಬಗ್ಗೆ ಕಾಳಜಿ ಇಲ್ಲ , ಕರೊನಾದಿಂದ ರಕ್ಷಣೆ ಮಾಡಿಕೊಳ್ಳುವುದು ಈಗ ನಿಮ್ಮದೇ

ಕೈಯಲ್ಲಿದೆ :  ರಾಹುಲ್​ ಗಾಂಧಿ -Vishwanews24

ನವದೆಹಲಿ: ಸದಾ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಮೆಂಟ್​ ಮಾಡುತ್ತ, ಹಲವಾರು ಬಾರಿ ಕಮೆಂಟಿಗರಿಂದ ಟ್ರೋಲ್​ ಆಗುತ್ತಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಈ ಬಾರಿಯೂ ಪುನಃ ಅದೇ ಕೆಲಸ ಮಾಡಿದ್ದಾರೆ.

ಇತ್ತ ಅಧಿವೇಶನ ಶುರುವಾಗುವ ಎರಡು ದಿನ ಮುಂಚಿತವಾಗಿಯೇ ತಾಯಿಯ ಜತೆ ಅಮೆರಿಕಕ್ಕೆ ಹಾರಿರುವ ರಾಹುಲ್​ ಗಾಂಧಿ ಅಲ್ಲಿಂದ ಪ್ರಧಾನಿ ಮೋದಿ ಅವರ ವಿರುದ್ಧ ವಾಗ್ದಾಳಿ ಮುಂದುರೆಸಿದ್ದಾರೆ. ತಮ್ಮ ಟ್ವಿಟರ್​ ಖಾತೆಯಲ್ಲಿ ಮೋದಿ ಅವರ ವಿರುದ್ಧ ಬರೆದಿದ್ದಾರೆ.

‘ಪ್ರಧಾನಿಯವರು ನವಿಲುಗಳ ಜತೆ ಬಿಜಿಯಾಗಿದ್ದಾರೆ, ಹೀಗಾಗಿ ದೇಶದ ಜನರು ನಿಮ್ಮ ಜೀವನವನ್ನು ನೀವೇ ನೋಡಿಕೊಳ್ಳಬೇಕು, ನಿಮ್ಮ ಜಾಗ್ರತೆಯಲ್ಲಿ ನೀವಿರಿ. ಕರೊನಾದಿಂದ ರಕ್ಷಣೆ ಮಾಡಿಕೊಳ್ಳುವುದು ಈಗ ನಿಮ್ಮದೇ ಕೈಯಲ್ಲಿದೆ, ಪ್ರಧಾನಿಯವರಿಗೆ ದೇಶದ ಬಗ್ಗೆ ಕಾಳಜಿ ಇಲ್ಲ’ ಎಂದಿದ್ದಾರೆ.

ಈ ವಾರ ಭಾರತದಲ್ಲಿ ಕೋವಿಡ್-19 ಪ್ರಕರಣಗಳು 50 ಲಕ್ಷ ಗಡಿ ದಾಟಬಹುದು. ಸಕ್ರಿಯ ಕೇಸುಗಳೇ 10 ಲಕ್ಷವಾಗಬಹುದು. ಒಬ್ಬ ಮನುಷ್ಯನ ಅಹಂಕಾರದ ಕೊಡುಗೆಯೇ ಸರಿಯಾದ ಯೋಜನೆ ಹಾಕಿಕೊಳ್ಳದೆ ಲಾಕ್ ಡೌನ್ ಹೇರಿಕೆ ಮಾಡಿದ್ದು, ಇದರಿಂದ ದೇಶದೆಲ್ಲೆಡೆ ಕರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ.

ಸ್ವಾವಲಂಬಿಗಳಾಗಿ, ಆತ್ಮ ನಿರ್ಭರರಾಗಿ ಎಂದು ಪ್ರಧಾನಿಯವರು ಹೇಳುತ್ತಾರೆ. ಅದರರ್ಥ ನಿಮ್ಮ ಜೀವನವನ್ನು ನೀವೇ ನೋಡಿಕೊಳ್ಳಿ ಎಂದು, ಏಕೆಂದರೆ ಪ್ರಧಾನಿಯವರು ತಮ್ಮ ನವಿಲುಗಳ ಜತೆ ಬಿಜಿಯಾಗಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

 

ಕಳೆದ ತಿಂಗಳು ಪ್ರಧಾನಿಯವರು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ವಿಡಿಯೊವನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, ಪ್ರಧಾನಿಯವರು ತಮ್ಮ ನವಿಲುಗಳ ಜತೆ ಸಮಯ ಕಳೆಯುತ್ತಿದ್ದಾರೆ. ಅವರಿಗೆ ದೇಶದ ನಾಗರಿಕರ ಬಗ್ಗೆ ಚಿಂತೆಯಿಲ್ಲ ಎಂದಿದ್ದಾರೆ.

ಸೋನಿಯಾ ಗಾಂಧಿಯವರ ನಿಯಮಿತ ವೈದ್ಯಕೀಯ ಪರೀಕ್ಷೆಗಾಗಿ ವಿದೇಶಕ್ಕೆ ಹೋಗಲಿರುವುದಾಗಿ ಕಾಂಗ್ರೆಸ್​ ಮೂಲಗಳು ಹೇಳಿದ್ದು, ರಾಹುಲ್​ ಗಾಂಧಿ ತಾಯಿಗೆ ಸಾಥ್​ ನೀಡಿರುವುದಾಗಿ ಹೇಳಲಾಗಿದೆ. ಸೂಕ್ತ ಚಿಕಿತ್ಸೆ ಬಳಿಕ ತಾಯಿ-ಮಗ ಇಬ್ಬರೂ ಮರಳಿ ಬಂದು ಸಂಸತ್ತಿನ ಕಲಾಪದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷ ಸ್ಪಷ್ಟಪಡಿಸಿದೆ.

ಸೋನಿಯಾಗಾಂಧಿ ಸುಮಾರು ಎರಡು ವಾರ ಅಮೆರಿಕದಲ್ಲೇ ಇರಲಿದ್ದಾರೆ. ಆದರೆ ರಾಹುಲ್ ಗಾಂಧಿಯವರು ಒಂದೇ ವಾರ ಇದ್ದು ವಾಪಸಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್​ ಗಾಂಧಿ, ಸಂಸತ್ತಿನ ಕಲಾಪದಲ್ಲಿ ಬೇಗನೆ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸುರ್ಜೆವಾಲಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago