Featured

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ

ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ ದಾಖಲೆ ಬರೆದ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪ್ರಧಾನಿಯಾಗಿ ಸತತ 4,399 ದಿನಗಳ ಸುಸ್ಥಿರ ಆಡಳಿತವನ್ನು ಪೂರ್ಣಗೊಳಿಸಿದ್ದು, ಈ ಮೂಲಕ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ ದಾಖಲೆ ಬರೆದಿದ್ದಾರೆ.

2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರು ಇಂದಿಗೆ 4,399 ದಿನಗಳ ನಿರಂತರ ಅಧಿಕಾರಾವಧಿಯನ್ನ ಪೂರೈಸಿದ್ದಾರೆ. ಪ್ರಧಾನಿಯಾಗಿ ಸತತ 4,399 ದಿನಗಳ ಆಡಳಿತ ನಡೆಸುವ ಮೂಲಕ ಪ್ರಧಾನಿ ಮೋದಿ ಅವರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನ ಮುರಿದಿದ್ದಾರೆ. ಇದರೊಂದಿಗೆ ಮೋದಿ ಅವರು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

 

ನೆಹರೂ ಅವರು 1952ರ ಮೇ 13ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿ, 1964ರ ಮೇ 27ರವರೆಗೆ ಒಟ್ಟು 4,398 ದಿನಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿದ್ದರು. ಇದೀಗ ಮೋದಿ ಅವರು ಪ್ರಧಾನಿಯಾಗಿ 4,399 ದಿನಗಳು ನಿರಂತರವಾಗಿ ಸೇವೆ ಸಲ್ಲಿಸುವ ಮೂಲಕ 64 ವರ್ಷಗಳ ಈ ದಾಖಲೆಯನ್ನು ಮುರಿದಿದ್ದಾರೆ.

ಈ ಐತಿಹಾಸಿಕ ದಾಖಲೆಯ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, “ಕಳೆದ 12 ವರ್ಷಗಳ ಈ ಸುದೀರ್ಘ ಪಯಣವು ದೇಶದ ಜನರ ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಸಮರ್ಪಿತವಾಗಿದೆ. 140 ಕೋಟಿ ಭಾರತೀಯರ ಆಶೀರ್ವಾದದೊಂದಿಗೆ ನಾವು ಯುವಕರು, ಮಹಿಳೆಯರು ಹಾಗೂ ರೈತ ಬಾಂಧವರ ಸಬಲೀಕರಣಕ್ಕಾಗಿ ಶ್ರಮಿಸಿದ್ದೇವೆ. ಮೂಲಸೌಕರ್ಯ ಅಭಿವೃದ್ಧಿಯಿಂದ ಹಿಡಿದು ಡಿಜಿಟಲ್ ಕ್ರಾಂತಿಯವರೆಗೆ ಭಾರತವು ಇಂದು ಜಾಗತಿಕ ಮಟ್ಟದಲ್ಲಿ ಹೊಸ ಗುರುತನ್ನು ಪಡೆದುಕೊಂಡಿದೆ” ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ ಆಡಳಿತ ಹಾಗೂ ಜಾಗತಿಕ ನಾಯಕತ್ವವನ್ನು ದೇಶದ ಪ್ರಮುಖ ನಾಯಕರು ಹಾಗೂ ಜಾಗತಿಕ ನಾಯಕರೂ ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್, ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ, ಪಪುವಾ ನ್ಯೂಗಿನಿ ಪ್ರಧಾನಿ ಜೇಮ್ಸ್ ಮರಾಪೆ, ಸೇರಿದಂತೆ ಅನೇಕ ಜಾಗತಿಕ ಹಾಗೂ ದೇಶದ ನಾಯಕರು ಮೋದಿ ಅವರನ್ನು ಶ್ಲಾಘಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಯುವಕ ಆತ್ಮಹತ್ಯೆ  – vishwanews24

ಬೆಳ್ತಂಗಡಿ: ಯುವಕ ಆತ್ಮಹತ್ಯೆ  ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಬಾಳೆಹಿತ್ತಿಲು ಎಂಬಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.…

18 minutes ago

ನಾನು ಸಿಎಂ ಆಗಿರುವುದನ್ನು ವಿಪಕ್ಷಗಳಿಗೆ ಸಹಿಸಲಾಗುತ್ತಿಲ್ಲ : ಡಿ.ಕೆ. ಶಿವಕುಮಾರ್ – vishwanews24

ನಾನು ಸಿಎಂ ಆಗಿರುವುದನ್ನು ವಿಪಕ್ಷಗಳಿಗೆ ಸಹಿಸಲಾಗುತ್ತಿಲ್ಲ ; ದಿನವೂ ನನ್ನ ವಿರುದ್ಧ ನೆಗೆಟಿವ್ ಹುಡುಕುತ್ತಾರೆ : ಡಿ.ಕೆ. ಶಿವಕುಮಾರ್ ಮೈಸೂರು:…

44 minutes ago

ನ.14 ರಿಂದ 20 ರವರೆಗೆ ಉಡುಪಿ ಜಿಲ್ಲೆಯಲ್ಲಿ 73ನೇ ಅಖಿಲ ಭಾರತ ಸಹಕಾರ ಸಪ್ತಾಹ : ಇಂದ್ರಾಳಿ ಜಯಕರ್ ಶೆಟ್ಟಿ – vishwanews24

ಉಡುಪಿ ಜಿಲ್ಲೆಯ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಮಾಹಿತಿ ನೀಡಿದ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ -vishwanews24 ಉಡುಪಿ…

49 minutes ago

ನಾಳೆ ಬೆಂಗಳೂರಿಗೆ ಪ್ರಧಾನಿ ; ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ ; ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳು – vishwanews24

ನಾಳೆ ಬೆಂಗಳೂರಿಗೆ ಪ್ರಧಾನಿ ; ರಸ್ತೆ ಸಂಚಾರ ಮಾರ್ಗದಲ್ಲಿ ಬದಲಾವಣೆ ; ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳು ಬೆಂಗಳೂರು: ಪ್ರಧಾನಮಂತ್ರಿ…

57 minutes ago

ಶಿರ್ವ: ಗೂಗಲ್ ಪೇಗೆ ಹಣ ಜಮೆಯಾದ ನಕಲಿ ಸಂದೇಶ ಕಳುಹಿಸಿ ವ್ಯಕ್ತಿಗೆ ₹2.49 ಲಕ್ಷ ವಂಚನೆ – vishwanews24

ಶಿರ್ವ: ಗೂಗಲ್ ಪೇಗೆ ಹಣ ಜಮೆಯಾದ ನಕಲಿ ಸಂದೇಶ ಕಳುಹಿಸಿ ವ್ಯಕ್ತಿಗೆ ₹2.49 ಲಕ್ಷ ವಂಚನೆ ಶಿರ್ವ: ಮೊಬೈಲಿನಲ್ಲಿರುವ ಗೂಗಲ್…

2 hours ago

ನ.13ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉಡುಪಿಗೆ ಭೇಟಿ – vishwanews24

ನ.13ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉಡುಪಿಗೆ ಭೇಟಿ ಉಡುಪಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್…

2 hours ago