ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪ್ರಧಾನಿಯಾಗಿ ಸತತ 4,399 ದಿನಗಳ ಸುಸ್ಥಿರ ಆಡಳಿತವನ್ನು ಪೂರ್ಣಗೊಳಿಸಿದ್ದು, ಈ ಮೂಲಕ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ ದಾಖಲೆ ಬರೆದಿದ್ದಾರೆ.
2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರು ಇಂದಿಗೆ 4,399 ದಿನಗಳ ನಿರಂತರ ಅಧಿಕಾರಾವಧಿಯನ್ನ ಪೂರೈಸಿದ್ದಾರೆ. ಪ್ರಧಾನಿಯಾಗಿ ಸತತ 4,399 ದಿನಗಳ ಆಡಳಿತ ನಡೆಸುವ ಮೂಲಕ ಪ್ರಧಾನಿ ಮೋದಿ ಅವರು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನ ಮುರಿದಿದ್ದಾರೆ. ಇದರೊಂದಿಗೆ ಮೋದಿ ಅವರು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ನೆಹರೂ ಅವರು 1952ರ ಮೇ 13ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿ, 1964ರ ಮೇ 27ರವರೆಗೆ ಒಟ್ಟು 4,398 ದಿನಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿದ್ದರು. ಇದೀಗ ಮೋದಿ ಅವರು ಪ್ರಧಾನಿಯಾಗಿ 4,399 ದಿನಗಳು ನಿರಂತರವಾಗಿ ಸೇವೆ ಸಲ್ಲಿಸುವ ಮೂಲಕ 64 ವರ್ಷಗಳ ಈ ದಾಖಲೆಯನ್ನು ಮುರಿದಿದ್ದಾರೆ.
ಈ ಐತಿಹಾಸಿಕ ದಾಖಲೆಯ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, “ಕಳೆದ 12 ವರ್ಷಗಳ ಈ ಸುದೀರ್ಘ ಪಯಣವು ದೇಶದ ಜನರ ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಸಮರ್ಪಿತವಾಗಿದೆ. 140 ಕೋಟಿ ಭಾರತೀಯರ ಆಶೀರ್ವಾದದೊಂದಿಗೆ ನಾವು ಯುವಕರು, ಮಹಿಳೆಯರು ಹಾಗೂ ರೈತ ಬಾಂಧವರ ಸಬಲೀಕರಣಕ್ಕಾಗಿ ಶ್ರಮಿಸಿದ್ದೇವೆ. ಮೂಲಸೌಕರ್ಯ ಅಭಿವೃದ್ಧಿಯಿಂದ ಹಿಡಿದು ಡಿಜಿಟಲ್ ಕ್ರಾಂತಿಯವರೆಗೆ ಭಾರತವು ಇಂದು ಜಾಗತಿಕ ಮಟ್ಟದಲ್ಲಿ ಹೊಸ ಗುರುತನ್ನು ಪಡೆದುಕೊಂಡಿದೆ” ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರ ಆಡಳಿತ ಹಾಗೂ ಜಾಗತಿಕ ನಾಯಕತ್ವವನ್ನು ದೇಶದ ಪ್ರಮುಖ ನಾಯಕರು ಹಾಗೂ ಜಾಗತಿಕ ನಾಯಕರೂ ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್, ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ, ಪಪುವಾ ನ್ಯೂಗಿನಿ ಪ್ರಧಾನಿ ಜೇಮ್ಸ್ ಮರಾಪೆ, ಸೇರಿದಂತೆ ಅನೇಕ ಜಾಗತಿಕ ಹಾಗೂ ದೇಶದ ನಾಯಕರು ಮೋದಿ ಅವರನ್ನು ಶ್ಲಾಘಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…