ಕೆವಾಡಿಯಾ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್ ರ ‘ಏಕತಾ ಪ್ರತಿಮೆ’ ಲೋಕಾರ್ಪಣೆಗೊಂಡಿದೆ. ಪ್ರಧಾನಿ ಮೋದಿ ಪ್ರತಿಮೆ ಅನಾವರಣಗೊಳಿಸಿದರು.
ಗುಜರಾತ್‍ನ ಕೆವಾಡಿಯಾ ಬಳಿ ಸರ್ದಾರ್ ಪಟೇಲರ ಅತಿ ಎತ್ತರದ ಪ್ರತಿಮೆ ಅನಾವರಣಗೊಂಡಿತು. ನರ್ಮದಾ ತಟದಲ್ಲಿ ನಿರ್ಮಿಸಲಾಗಿರುವ ಈ ಪ್ರತಿಮೆಯು ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಎಂಬ ಕೀರ್ತಿಗೆ ಭಾಜನವಾಗಿದ್ದು, ಪ್ರತಿಮೆ 182 ಮೀಟರ್ ಎತ್ತರ ಹೊಂದಿದೆ. ಈ ಮೂಲಕ ದೇಶದ ‘ಏಕತೆಯ ಹರಿಕಾರ’ನಿಗೆ ಗೌರವ ಸಮರ್ಪಿಸಲಾಗಿದೆ.
ಪ್ರಧಾನಿ ಮೋದಿ ಹಾಗೂ ಇತರ ಗಣ್ಯರು ಪ್ರತಿಮೆಗೆ ಕುಂಭಾಭಿಷೇಕ ಮಾಡುವ ಮೂಲಕ ಅದನ್ನು ಲೋಕಾರ್ಪಣೆ ಮಾಡಿದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ, ಉಪ ಮುಖ್ಯಮಂತ್ರಿ ನಿತಿನ್ ಪಟೇಲ್, ಮಧ್ಯ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮುಂತಾದವರು ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…