ರಾಯಚೂರು:ಚಂದ್ರಯಾನ-2 ನೌಕೆ ಚಂದ್ರನ ಅಂಗಳದಲ್ಲಿ ಇಳಿಯುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ವೀಕ್ಷಿಸಲು ರಾಯಚೂರಿನ ಸಿಂಧನೂರಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ.
ಸೆಪ್ಟೆಂಬರ್ 7ರಂದು ಬೆಂಗಳೂರಿನ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಕಚೇರಿಯಲ್ಲಿ ವೀಕ್ಷಿಸಲು ಸಿಂಧನೂರಿನ ಡಾಫಡಿಲ್ಸ್ ಕಾನ್ಸೆಪ್ಟ್ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ. ವೈಷ್ಣವಿ ಆಯ್ಕೆಯಾಗಿದ್ದಾಳೆ.
‘ಮೋದಿ ಜತೆ ಮಾತನಾಡಲು ನನಗೊಂದು ಅವಕಾಶ ಸಿಕ್ಕಿದೆ. ನಾನು ಮುಂದೆ ಇಸ್ರೋದಲ್ಲಿ ಇಂಜಿನಿಯರಿಂಗ್ ಮಾಡುವ ಮಹಾದಾಸೆ ಹೊಂದಿದ್ದೇನೆ. ನನಗೆ ಶಾಲೆಯಲ್ಲಿ ಎಲ್ಲ ರೀತಿಯ ಮಾರ್ಗದರ್ಶನ ಸಿಕ್ಕಿದ್ದರಿಂದ ಈ ಸಾಧನೆ ಸಾಧ್ಯವಾಗಿದೆ’ ಎಂದು ನಗರ ಹೊರವಲಯ ಹೊಸಳ್ಳಿ(ಇಜೆ) ಕ್ರಾಸ್ ಬಳಿಯಿರುವ ಡಾಫಡಿಲ್ಸ್ ಕಾನ್ಸೆಫ್ಟ್ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ, ಹೇಳಿದರು.
ಆನ್ ಲೈನ್ ಮೂಲಕ ಕಳೆದ ಆ.25 ರಂದು ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೈಷ್ಣವಿ 20 ಪ್ರಶ್ನೆಗಳಿಗೆ 5 ನಿಮಿಷದಲ್ಲಿ ಉತ್ತರಿಸಿದ್ದರು. 20 ಪ್ರಶ್ನೆಗಳಿಗೆ 10 ನಿಮಿಷಗಳಲ್ಲಿ ಉತ್ತರಿಸಲು ಅವಕಾಶ ನೀಡಲಾಗಿತ್ತು. ಆದರೆ, ವೈಷ್ಣವಿ 5 ನಿಮಿಷದಲ್ಲಿ ಉತ್ತರಿಸಿ ಪ್ರಧಾನಿ ಜೊತೆ ಚಂದ್ರಯಾನ 2 ಇಳಿಯುವುದನ್ನ ವೀಕ್ಷಿಸಲು ಆಯ್ಕೆಯಾಗಿದ್ದಾಳೆ,.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…