ನವದೆಹಲಿ: ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಹೀನಾಯ ಸೋಲಾಗಿದೆ. ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ಮೋದಿ ಉತ್ತರ ನೀಡಿದ ಬಳಿಕ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಮತದಾನಕ್ಕೆ ಅನುಮತಿ ನೀಡಿದರು. ಸರ್ಕಾರದ ಪರ 325 ಮತಗಳು ಬಿದ್ದರೆ, ಅವಿಶ್ವಾಸ ನಿರ್ಣಯದ ಪರ 126 ಮತ ಬಂದಿತು. ಸದನದಲ್ಲಿ ಈ ವೇಳೆ ಒಟ್ಟು 451 ಸದಸ್ಯರು ಹಾಜರಿದ್ದರು.
ವಿಪಕ್ಷಗಳು ಮೋದಿ ಹಠಾವೋ ಎಂಬ ಉದ್ದೇಶದಿಂದ ಬಲ ಪ್ರದರ್ಶನಕ್ಕೆ ಮುಂದಾಗಿವೆ. ಇದು ಬಲ ಪ್ರದರ್ಶನ ಅಲ್ಲ, ಬಲವಂತದ ಪ್ರದರ್ಶನ ಅಂತಾ ವಾಗ್ದಾಳಿ ನಡೆಸಿದರು. ಯಾರು ಅಧಿಕಾರಕ್ಕೆ ಬರೋದಿಲ್ಲವೋ, ಅವರು ಅಹಂಕಾರವನ್ನು ಅಳವಡಿಸಿಕೊಂಡಿದ್ದಾರೆ. 2019ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿ ಪ್ರಧಾನಿ ಯಂತೆ ವ್ಯಂಗ್ಯ ಮಾಡಿದರು.
ವಿರೋಧ ಬಣಗಳು ಒಂದಾಗಿವೆ: ಕೇವಲ ಓರ್ವ ಮೋದಿಯನ್ನು ಹಿಂದಿಕ್ಕಿಲು ಎಲ್ಲ ವಿರೋಧ ಬಣಗಳು ಒಂದಾಗಿವೆ. ಪ್ರಧಾನಿ ಕುರ್ಚಿ ಏರಲು ರಾಹುಲ್ ಗಾಂಧಿ ಆತುರರಾಗಿದ್ದಾರೆ. ಕೆಲವರು ತಾವು ಶಿವಭಕ್ತರು ಅಂತಾ ಹೇಳಿಕೊಳ್ಳುತ್ತಿದ್ದಾರೆ. ನಾನು ಕೂಡ ಶಿವದೇವನನ್ನು ನಂಬುತ್ತೇನೆ ಮತ್ತು ಆರಾಧಿಸುತ್ತೇನೆ. ಇಂದು ಅದೇ ಶಿವನಲ್ಲಿ 2024ರಲ್ಲಿ ರಾಹುಲ್ ಇದೇ ರೀತಿ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಲಿ ಎಂದು ಕೇಳುತ್ತೇನೆ ಎಂದು ಹೇಳುವ ಮೂಲಕ ಮುಂದಿನ ಚುನಾವಣೆಯಲ್ಲಿ ತಾವೇ ಅಧಿಕಾರಕ್ಕೆ ಬರೋದು ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ದೇಶದಲ್ಲಿ ಈಗಾಗಲೇ ಮುಳುಗಿದೆ. ಕಾಂಗ್ರೆಸ್ ಜೊತೆ ಹೋಗುವವರು ಮುಳಗಲಿದ್ದೀರಿ, ಹಾಗಾಗಿ ಅವರ ಜೊತೆ ಹೋಗುವುದನ್ನು ನಿಲ್ಲಿಸಿ ಅಂದ್ರು.
ನಮ್ಮದು ಕೆಲಸ ಮಾಡುವ ಸರ್ಕಾರ. ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಎಲ್ಲ ಕೆಲಸಗಳನ್ನು ಕಾಂಗ್ರೆಸ್ ಸರ್ಕಾರ ಮಾಡಬಹುದಿತ್ತು ಆದ್ರೆ ಮಾಡಲಿಲ್ಲ. ಜನ್‍ಧನ್ ಯೋಜನೆಯಲ್ಲಿ ಬ್ಯಾಂಕ್ ನೋಡದವರು ಖಾತೆಗಳನ್ನು ಹೊಂದಿದ್ದಾರೆ. ಇದೇ ವೇಳೆ ಸರ್ಕಾರದ ಯೋಜನೆ ಕಾರ್ಯಕ್ರಮಗಳ ಉದಾಹರಣೆಯನ್ನು ನೀಡುವ ಮೂಲಕ ವಿರೋಧ ಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…