ಪ್ರಧಾನಿ ತಾಯಿ ಹೀರಾಬೆನ್ ನಿಧನ – ಮೋದಿ ಭಾವುಕ ಟ್ವೀಟ್‌ -Vishwanews24

Featured, ರಾಷ್ಟ್ರ ನ್ಯೂಸ್

ಪ್ರಧಾನಿ ತಾಯಿ ಹೀರಾಬೆನ್ ನಿಧನ – ಮೋದಿ ಭಾವುಕ ಟ್ವೀಟ್‌

ಅಹಮದಾಬಾದ್‌,: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (100) ಇನ್ನಿಲ್ಲ.

ಶತಾಯುಶಿಯಾಗಿದ್ದ ಅವರನ್ನು ಕಳೆದ ಎರಡು ದಿನಗಳಿಂದ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ. ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ. ಹೀರಾಬೆನ್ ಅವರು ಜೂನ್ 18, 1923 ರಂದು ಜನಿಸಿದ್ದು ಶತಾಯುಶಿ ಎಂಬ ಹಿರಿಮೆಗೂ ಪಾತ್ರರಾಗಿದ್ದರು.

ತಾಯಿ ಹೀರಾಬೆನ್ ಅವರ ನಿಧನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಟ್ವೀಟ್‌ ಮಾಡಿದ್ದಾರೆ. ‘ಅದ್ಭುತವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ.. ತಾಯಿಯಲ್ಲಿ ನಾನು ಯಾವಾಗಲೂ ತ್ರಿಮೂರ್ತಿಗಳನ್ನು ಅನುಭವಿಸಿದ್ದೇನೆ. ಅಮ್ಮನಲ್ಲಿ ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನ ಎಂಬ ಮೂರು ಗುಣಗಳನ್ನು ಕಂಡಿದ್ದೇನೆ’ ಎಂದು ಭಾವುಕರಾಗಿ ನುಡಿದಿದ್ದಾರೆ. ತಾಯಿ ನಿಧನದ ಹಿನ್ನೆಲೆಯಲ್ಲಿ ಮೋದಿ ಅವರು ಅಹಮದಾಬಾದ್‌ಗೆ ತೆರಳಿದ್ದಾರೆ,

शानदार शताब्दी का ईश्वर चरणों में विराम… मां में मैंने हमेशा उस त्रिमूर्ति की अनुभूति की है, जिसमें एक तपस्वी की यात्रा, निष्काम कर्मयोगी का प्रतीक और मूल्यों के प्रति प्रतिबद्ध जीवन समाहित रहा है। pic.twitter.com/yE5xwRogJi

— Narendra Modi (@narendramodi) December 30, 2022

Leave a Reply