Featured

ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದು 71ನೇ ಹುಟ್ಟುಹಬ್ಬದ ಸಂಭ್ರಮ ; ಗಣ್ಯರ ಶುಭಾಶಯ -Vishwanews24

ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದು 71ನೇ ಹುಟ್ಟುಹಬ್ಬದ ಸಂಭ್ರಮ ; ಗಣ್ಯರ ಶುಭಾಶಯ -Vishwanews24

ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದು 71ನೇ ಹುಟ್ಟುಹಬ್ಬದ ಸಂಭ್ರಮ (Prime Minister Narendra Modi Birthday). ಇಡೀ ದೇಶಾದ್ಯಂತ ಬಿಜೆಪಿ ಮಾತ್ರವಲ್ಲದೆ, ಜನಸಾಮಾನ್ಯರೂ ಕೂಡ ಆಚರಣೆ ಮಾಡುತ್ತಿದ್ದಾರೆ. ಅದರಲ್ಲಿ ಬಿಜೆಪಿಯಂತೂ ನೂರೆಂಟು ಸೇವಾ ಕಾರ್ಯಕ್ರಮ ಹಮ್ಮಿಕೊಂಡಿದೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಜಾರಿಗೊಳಿಸಿದ ಯೋಜನೆಗಳನ್ನು ದೊಡ್ಡ ಪರದೆಗಳ ಮೇಲೆ ತೋರಿಸುವುದು, ಮೋದಿಯವರ ಜೀವನವನ್ನು ಸಾರುವ ವಸ್ತುಪ್ರದರ್ಶನ, ರಕ್ತದಾನ ಶಿಬಿರಗಳು, ಕೊವಿಡ್​ 19 ಲಸಿಕಾ ಸೇವಾ ಅಭಿಯಾನ, ಸ್ವಚ್ಛತಾ ಅಭಿಯಾನಗಳನ್ನು ಬಿಜೆಪಿ ಆಯೋಜಿಸಿದ್ದು, ಇಡೀ ದಿನ ದೇಶಾದ್ಯಂತ ಕಾರ್ಯಕ್ರಮಗಳು ನಡೆಯಲಿವೆ.

ಅಂದಹಾಗೆ ಈ ಕಾರ್ಯಕ್ರಮಗಳನ್ನು ಇಂದಿನಿಂದ ಅಕ್ಟೋಬರ್​ 7ರವರೆಗೆ ನಡೆಸಲು ಕಾರ್ಯಕರ್ತರು ನಿರ್ಧರಿಸಿದ್ದಾರೆ. ಸೆಪ್ಟೆಂಬರ್​ 25ರಂದು ಪಂಡಿತ್​ ದೀನ್​ ದಯಾಳ್​ ಜನ್ಮದಿನ, ಅಕ್ಟೋಬರ್​ 2ರಂದು ಗಾಂಧೀ ಜಯಂತಿ ಹಾಗೂ ಅಕ್ಟೋಬರ್​ 7ಕ್ಕೆ ಸರಿಯಾಗಿ ನರೇಂದ್ರ ಮೋದಿಯವರು ಸರ್ಕಾರಗಳ ಮುಖ್ಯಸ್ಥರಾಗಿ 20ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಮೂರು ವಾರಗಳ ಕಾಲ ಸೇವಾ ಅಭಿಯಾನ ನಡೆಯಲಿದೆ.

ಇಂದು 71ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್​, ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸೇರಿ ಹಲವು ಗಣ್ಯರು ಶುಭಕೋರಿದಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್​ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ‘ನಿಮಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಿಮಗೆ ದೇವರು ಆಯುರಾರೋಗ್ಯ ನೀಡಲಿ. ಹಾಗೇ, ನಿಮ್ಮ ಅಹರ್ನಿಶಂ​ ಸೇವಾಮಹೆ (ಸ್ವಂತಕ್ಕಿಂತ ಸೇವೆ ಮೊದಲು) ಎಂಬ ಜಟಿಲ ಮಂತ್ರದೊಂದಿಗೆ ದೇಶಸೇವೆಯನ್ನು ಮುಂದುವರಿಸಿ ಎಂದು ಹಾರೈಸುತ್ತೇನೆ’ ಎಂದು ಹೇಳಿದ್ದಾರೆ.

ಗೃಹ ಸಚಿವರ ಅಮಿತ್​ ಶಾ ಅವರು ಮೂರು ಟ್ವೀಟ್ ಮಾಡಿ ಪ್ರಧಾನಿ ಮೋದಿಯವರನ್ನು ಹೊಗಳಿದ್ದಾರೆ. ‘ನಮ್ಮ ದೇಶವು ಪ್ರಧಾನಿ ಮೋದಿಯವರ ರೂಪದಲ್ಲಿಅತ್ಯಂತ ಶಕ್ತಿಯುತ ಮತ್ತು ನಿರ್ಣಾಯಕ ನಾಯಕತ್ವವನ್ನು ಪಡೆದಿದೆ. ದಶಕಗಳಿಂದ ತಮ್ಮ ಹಕ್ಕುಗಳಿಂದ ವಂಚಿತರಾದ ಬಡ ಜನರಿಗೆ ಅದನ್ನು ಒದಗಿಸಿಕೊಡುವ ಮೂಲಕ ಒಂದು ಘನತೆಯುಕ್ತ ಜೀವನ ಒದಗಿಸಿಕೊಟ್ಟಿದ್ದಾರೆ. ಹಾಗೇ, ತಮ್ಮ ದಣಿವರಿಯದ ಕೆಲಸ ಮೂಲಕವೇ ಪ್ರಸಿದ್ಧರಾಗಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರವೆಂದರೆ ಏನೆಂದು ಇಡೀ ಜಗತ್ತಿಗೆ ತೋರಿಸಿದ್ದಾರೆ’ ಎಂದು ಒಂದು ಟ್ವೀಟ್​​ನಲ್ಲಿ ಅಮಿತ್​ ಶಾ ಹೇಳಿದ್ದಾರೆ. ಹಾಗೇ, ಭದ್ರತೆ, ಬಡವರ ಕಲ್ಯಾಣ, ಅಭಿವೃದ್ಧಿ ಮತ್ತು ಐತಿಹಾಸಿಕ ಸುಧಾರಣೆಗಳನ್ನು ಸಮನ್ವಯತೆಯಿಂದ ಹೇಗೆ ಮಾಡಬಹುದು ಎಂಬುದನ್ನು ತೋರಿಸಿದ್ದಾರೆ. ಮೋದಿಯವರ ದೃಢ ನಿಶ್ಚಯಗಳು ದೇಶವಾಸಿಗಳಲ್ಲಿ ಕೂಡ ಹೊಸ ಶಕ್ತಿ ಸೃಷ್ಟಿಸಿವೆ. ಹೀಗಾಗಿ ದೇಶವು ಹೊಸ ದಾಖಲೆಗಳನ್ನು ನಿರ್ಮಿಸುವಲ್ಲಿ, ಸ್ವಾವಲಂಬಿಯಾಗುವತ್ತ ಮುನ್ನಡೆದಿದೆ ಎಂದೂ ಅಮಿತ್​ ಶಾ ಹೇಳಿದರು.

ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಟ್ವೀಟ್ ಹೀಗಿದೆ:

ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ಪ್ರಧಾನಿ ಮೋದಿಯವರು ದೃಢ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ, ಕಲ್ಪನಾ ಶೀಲತೆ ಮತ್ತು ದೂರದೃಷ್ಟಿಗೆ ಹೆಸರಾದವರು. ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ಹೊರಟಿರುವ ಅವರ ಸಂಕಲ್ಪ, ಮೋದಿಯವರ ದೂರದೃಷ್ಟಿ, ಇಚ್ಛಾಶಕ್ತಿಯ ಸಂಕೇತವಾಗಿದೆ’ .

ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್​ ಟ್ವೀಟ್ ಮಾಡಿ, ಕಷ್ಟದ ಸಮಯದಲ್ಲಿ ಸಿಕ್ಕ ಸೂಕ್ತ ನಾಯಕ ನರೇಂದ್ರ ಮೋದಿ. ಭಾರತ ಮಾತೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ..ಹಾಗೇ, ಭಾರತ ಮಾತೆಯ ಮಾರ್ಗದರ್ಶನ ಅವರಿಗೆ ಇದೆ. ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಡಿ ಕೆಲಸ ಮಾಡಲು ನಮಗೆ ಹೆಮ್ಮೆಯಾಗುತ್ತದೆ. ಅವರಿಗೆ ದೀರ್ಘ ಆಯುಷ್ಯ, ಆರೋಗ್ಯವನ್ನು ದೇವರು ಪ್ರಾರ್ಥಿಸಲಿ ಎಂದು ಹೇಳಿದ್ದಾರೆ. ಹಾಗೇ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಟ್ವೀಟ್​ ಮಾಡಿ, ಸ್ವಾವಲಂಬಿ ಭಾರತದ ಮಹಾನ್​ ಸಂಕಲ್ಪ ಹೊತ್ತ ಮೋದಿಯವರು ಅತ್ಯಂತ ಯಶಸ್ವಿ ಪ್ರಧಾನಿ. ಅವರಿಗೆ ನನ್ನ ಹೃದಯಾಂತರಾಳದ ಶುಭಾಶಯಗಳು ಎಂದು ಹೇಳಿದ್ದಾರೆ.

ಹಾಗೇ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ಸ್ವಾತಂತ್ರ್ಯದ ನಂತರ ಭಾರತಕ್ಕೆ ದೊರೆತ ಒಬ್ಬ ದಿಟ್ಟ ಸ್ಪಷ್ಟ, ಸಮರ್ಥ ನಾಯಕ. ಜನರಲ್ಲಿ ರಾಷ್ಟ್ರಾಭಿಮಾನವನ್ನು ಮೂಡಿಸಿ ಹೊಸ ಭಾರತ ಕಟ್ಟಲು ಅಣಿಯಾಗಿರುವಂತಹ ನೆಚ್ಚಿನ ಪ್ರಧಾನಿ ಮೋದಿಜೀ ಅವರಿಗೆ ಶುಭಾಶಯಗಳು ಎಂದು ಹೇಳಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್​, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಟ್ವೀಟ್​ ಮೂಲಕ ಶುಭ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ಯೋಜನೆಗಳು, ಅವರ ಜೀವನದ ಹಾದಿ ತೋರಿಸುವ ಸಣ್ಣ ವಿಡಿಯೋ ಕೂಡ ಶೇರ್​ ಮಾಡಿದ್ದಾರೆ. ಇನ್ನುಳಿದಂತೆ ಎಲ್ಲ ಕೇಂದ್ರ ಸಚಿವರೂ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ವಿಶ್ ಮಾಡಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

21 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

22 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

23 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

23 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

23 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago