Featured

ಪ್ರಧಾನಿ ನರೇಂದ್ರ ಮೋದಿ ಅತೀದೊಡ್ಡ ಕೊಲೆಗಾರ ಮತ್ತು ಭಯೋತ್ಪಾದಕ: ವಿವಾದಾತ್ಮಕ ಹೇಳಿಕೆ ನೀಡಿದ ಎನ್‌ಸಿ ಶಾಸಕ ಜಾವೇದ್‌ ರಾಣಾ

ಶ್ರೀನಗರ : ಪ್ರಧಾನಿ ನರೇಂದ್ರ ಮೋದಿ ಓರ್ವ ಮಾನವ ಸಮೂಹವನ್ನೇ ಹತ್ಯೆಗೈದ ವ್ಯಕ್ತಿ ಹಾಗೂ ಅವರೊಬ್ಬ ಭಯೋತ್ಪಾದಕ ಎಂದು ಕಾಶ್ಮೀರದ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಶಾಸಕ ಜಾವೇದ್ ರಾಣಾ ವಾಗ್ದಾಳಿ ನಡೆಸಿದ್ದು, ಈ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಪ್ರಧಾನಮಂತ್ರಿ ಮೋದಿ ಇನ್ಸಾನಿಯತ್ ಕಾ ಖಾತಿಲ್, ಟೆರರಿಸ್ಟ್ ಎಂದು ತಮ್ಮ ಭಾಷಣದಲ್ಲಿ ಅವರು ಹೇಳಿದ್ದಾರೆಂದು ತಿಳಿದು ಬಂದಿದೆ. ನಮ್ಮನ್ನು ಭಯೋತ್ಪಾದಕರೆಂದು ಅವರು ಕರೆಯುತ್ತಾರೆ, ಆದರೆ ಅವರೇ ಅತೀದೊಡ್ಡ ಭಯೋತ್ಪಾದಕರು ಹಾಗೂ ಮಾನವತೆಯ ಅತೀದೊಡ್ಡ ಕೊಲೆಗಾರನೆಂದರೆ ನಮ್ಮ ದೇಶದ ಪ್ರಧಾನಿ ಎಂದು ಅವರು ಹೇಳಿದ್ದಾರೆ.

ರಾಣಾ ಅವರು 2002ರ ಗುಜರಾತ್‌ ದೊಂಬಿಯನ್ನು ತಮ್ಮ ಭಾಷಣದಲ್ಲಿ ಉಲ್ಲೇಖೀಸಿದ್ದಾರೆ. ಶಾಸಕ ರಾಣಾ ಅವರು ಈ ಹಿಂದೆಯೂ ಇದೇ ರೀತಿಯ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಕೇಂದ್ರ ಸರಕಾರ ಸಂವಿಧಾನದ 35ಎ ಮತ್ತು 370ನೇ ವಿಧಿಯನ್ನು ಬದಲಾಯಿಸಿದಲ್ಲಿ ಕಾಶ್ಮೀರದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸುವುದಿಲ್ಲ ಎಂದು ರಾಣಾ ಈ ತಿಂಗಳ ಆದಿಯಲ್ಲಿ ಹೇಳಿದ್ದರು. ಜಮ್ಮು ಕಾಶ್ಮೀರದ ಸ್ವಾಯತ್ತ ಸ್ವರೂಪವನ್ನು ನಾಶ ಮಾಡುವುದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನ ಅಜೆಂಡಾ ಆಗಿದೆ. ಸಂವಿದಾನದ 35ಎ ಮತ್ತು 370 ವಿಧಿಯ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್‌ ಮುಂದೆ ಸತ್ಯಾಂಶಗಳನ್ನು ತಿರುಚಿ ವಾದ ಮಂಡಿಸಲು ಕೇಂದ್ರ ಸರಕಾರ ಯತ್ನಿಸುತ್ತಿದೆ ಎಂದು ರಾಣಾ ಆರೋಪಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 hour ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

3 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

3 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 hours ago