Featured

ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ಭಸ್ಮಾಸುರ : ಕಾಂಗ್ರೆಸ್ ಮುಖಂಡ ವಿ.ಎಸ್ ಉಗ್ರಪ್ಪ -Vishwanews24

ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ಭಸ್ಮಾಸುರ : ಕಾಂಗ್ರೆಸ್ ಮುಖಂಡ ವಿ.ಎಸ್ ಉಗ್ರಪ್ಪ -Vishwanews24

ಬಳ್ಳಾರಿ: “ದೇಶದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸುವುದಾಗಿ ಹೇಳಿದ್ದ ಪ್ರಧಾನಿ ಮೋದಿ ಅವರು ಇಂದು ಅಧೋಗತಿಯತ್ತ ಸಾಗಿಸುತ್ತಿದ್ದಾರೆ. ರೈತಪರ ಹಾಗೂ ಜನಪರ ಕಾನೂನುಗಳನ್ನು ಜನವಿರೋಧಿಯಾಗಿ ಮಾರ್ಪಾಡು ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ಭಸ್ಮಾಸುರ” ಎಂದು ಕಾಂಗ್ರೆಸ್‌ ಮುಖಂಡ ವಿ.ಎಸ್‌‌‌. ಉಗ್ರಪ್ಪ ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರತಿ ವರ್ಷ ಒಂದು ಕೋಟಿ ಉದ್ಯೋಗ ಸೃಷ್ಠಿ ಮಾಡುವುದಾಗಿ ಹೇಳಿದ್ದರು. ಆದರೆ, ಅವರು ನೀಡಿರುವ ಭರವಸೆ ಈಡೇರಿಲ್ಲ. ನೋಟಿ ರದ್ಧತಿಯಿಂದ ಕಪ್ಪು ಹಣದ ಪತ್ತೆ ಕಾರ್ಯವೂ ಆಗಿಲ್ಲ” ಎಂದಿದ್ದಾರೆ.

ಇಂದಿರಾಗಾಂಧಿಯವರ ಅವಧಿಯಲ್ಲಿ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು ರಾಜ್ಯದ ಸಾವಿರಾರು ರೈತರ ಬದುಕನ್ನು ಕಾಂಗ್ರೆಸ್ ಸರ್ಕಾರ ಉತ್ತಮಪಡಿಸಿತ್ತು. ಆದರೆ ಈಗ ಕೃಷಿ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತರುವ ಮೂಲಕ ಪ್ರಧಾನಿ ಮೋದಿ ರೈತರ ಬದುಕಿನ ಮೇಲೆ ಮರಣ ಶಾಸನ ಬರೆದಿದೆ. ಇಂಥ ಅಮಾನವೀಯ ನಿರ್ಧಾರಗಳ ವಿರುದ್ಧ ದೇಶದಲ್ಲಿ ಎರಡನೇ ಸ್ವಾತಂತ್ರ್ಯ ಸಂಗ್ರಾಮ ನಡೆಯಲಿದೆ. ಅದರ ಸೂಚನೆಯು ದೆಹಲಿ ಮುಷ್ಕರದಲ್ಲೇ ದೊರಕಿದೆ. ನೂರಾರು ರೈತ ಸಂಘಟನೆಗಳು ಮತ್ತು 21 ರಾಜಕೀಯ ಪಕ್ಷಗಳು ನೇತೃತ್ವ ವಹಿಸಿರುವ ಹೋರಾಟದ ಕಾವು ದೇಶದಾದ್ಯಂತ ಹಬ್ಬಿದೆ’ ಎಂದರು.

‘ರಾಜ್ಯ‌ ಮತ್ತು ಕೇಂದ್ರ ಸರ್ಕಾರಗಳೆರಡೂ ಜನವಿರೋಧಿ ನೀತಿಗಳನ್ನೇ ಜಾರಿಗೆ ತರುತ್ತಿವೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಮೋದಿ ದಾರಿಯಲ್ಲೇ ರೈತರ ವಿರೋಧಿ ಕಾಯ್ದೆಗಳ ಜಾರಿಗೆ ಮುಂದಾಗಿದ್ದಾರೆ. ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕೃಷಿ ಜಮೀನುಗಳ ಮಾರಾಟಕ್ಕೆ ಇದ್ದ ಎಲ್ಲ ತಡೆಗಳನ್ನೂ ತೆರವುಗೊಳಿಸಿದ್ದಾರೆ’ ಎಂದು ಆರೋಪಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago