Featured

ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ : ರಾಜ್‍ನಾಥ್ ಸಿಂಗ್ -Vishwanews24

ಪ್ರಧಾನಿ ನರೇಂದ್ರ ಮೋದಿ ಅವರು ಎಂದಿಗೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ : ರಾಜ್‍ನಾಥ್ ಸಿಂಗ್ -Vishwanews24

ನವದೆಹಲಿ:  ರೈತರ ದಿನಾಚರಣೆಯ ಹಿನ್ನೆಲೆಯಲ್ಲಿ ಭಾರತದ 5ನೇ ಪ್ರಧಾನಮಂತ್ರಿಯಾಗಿದ್ದ ಚರಣ್‍ಸಿಂಗ್ ಚೌಧರಿ ಅವರನ್ನು ಸ್ಮರಿಸಿರುವ ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್, ಚೌಧರಿ ಅವರಿಂದ ಪ್ರಭಾವಿತ(ಸ್ಪೂರ್ತಿ)ರಾಗಿರುವ ಪ್ರಧಾನಿ ನರೇಂದ್ರಮೋದಿ ಅವರು ಎಂದಿಗೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಇಂದು ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್, ರೈತ ನಾಯಕ ಹಾಗೂ ಮಾಜಿ ಪ್ರಧಾನಿ ಚರಣ್ ಸಿಂಗ್ ಚೌಧರಿ ಅವರು ತಮ್ಮ ಜೀವಾತವಧಿಯವರೆಗೂ ರೈತರ ಪರ ಧ್ವನಿ ಎತ್ತಿದ್ದರು. ಕೃಷಿಕರ ಸಮಸ್ಯೆಗಳ ಪರಿಹಾರಕ್ಕೆ ಹೋರಾಟ ಮಾಡಿದ್ದರು. ಇಂದು ಅವರ ಜನ್ಮದಿನವಾಗಿದ್ದು, ರಾಷ್ಟ್ರೀಯ ಕೃಷಿ ದಿನಾಚರಣೆ ಆಚರಿಸಲಾಗುತ್ತಿದೆ. ದೇಶ ಸದಾ ಅವರ ಸೇವೆ ಹಾಗೂ ಕೊಡುಗೆಯನ್ನು ಸ್ಮರಿಸುತ್ತದೆ ಎಂದಿದ್ದಾರೆ.

ದೇಶದ ಅನ್ನದಾತರ ಆದಾಯ ಹೆಚ್ಚಾಗಬೇಕು, ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುವಂತಾಗಬೇಕು, ರೈತರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಚೌಧರಿ ಅವರು ಇಂಗಿತ ಹೊಂದಿದ್ದರು. ಈ ಸುಸಂದರ್ಭದಲ್ಲಿ ಪ್ರಸ್ತುತ ರೈತರಲ್ಲಿ ಉಂಟಾಗಿರುವ ಆತಂಕ ದೂರವಾಗಲಿದೆ ಎಂದು ಭರವಸೆ ನೀಡಿದರು.

ಇಂದು ರೈತ ದಿನಾಚರಣೆಯಂದು, ದೇಶದ ಎಲ್ಲ ಅನ್ನದಾತರಿಗೂ ಅಭಿನಂದನೆ. ದೇಶಕ್ಕೆ ಆಹಾರ ಭದ್ರತೆ ಒದಗಿಸಿದ್ದಾರೆ. ಕೆಲವು ರೈತರು ಕೃಷಿ ಕಾನೂನುಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರ ಅವರೊಂದಿಗೆ ಮುಕ್ತವಾಗಿ ಮಾತನಾಡುತ್ತದೆ. ಶೀಘ್ರದಲ್ಲೇ ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago