Featured

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ : ರಾಹುಲ್ ಗಾಂಧಿ -Vishwanews24

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ : ರಾಹುಲ್ ಗಾಂಧಿ -Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದಲ್ಲಿ ಕ್ಯಾಪಿಟಲ್ ಹಿಲ್ ಹಿಂಸಾಚಾರ ಮತ್ತು ರೈತರ ಪ್ರತಿಭಟನೆಯ ಬಗ್ಗೆ ಮೌನವಾಗಿರುವ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಇಸ್​ ಬಾರ್​ ಟ್ರಂಪ್​ ಸರ್ಕಾರ್​​’ ಎಂದು ಪ್ರಧಾನಿ ಅಂದು ಹೇಳಿದ್ದನ್ನು ನೆನಪಿಸಿಕೊಳ್ಳಲು ಇಚ್ಛಿಸುತ್ತೇನೆ. ದೇಶದ ಪ್ರಧಾನಿಯಾಗಿದ್ದುಕೊಂಡು ನೀವು ಆ ಹೇಳಿಕೆ ಕೊಡಬಾರದಿತ್ತು. ಆ ಹೇಳಿಕೆ ಅಮೆರಿಕನ್ನರ ಗೌರವಕ್ಕೆ ಚ್ಯುತಿ ತಂದತ್ತಾಗುತ್ತದೆ ಎಂದು ಹೇಳಿದ್ದಾರೆ.

ತಮ್ಮ ದೇಶದ ಅಧ್ಯಕ್ಷನ ಆಯ್ಕೆಯು ಅಮೆರಿಕನ್ನರಿಗೆ ಬಿಟ್ಟ ವಿಚಾರ. ಅದು ಅವರ ಆಯ್ಕೆ, ನಿಮ್ಮದಲ್ಲ. ಈ ರೀತಿಯ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ನಿಮಗೆ ಮೂಲ ವಿಷಯಗಳ ಬಗ್ಗೆ ತಿಳಿವಳಿಕೆ ಕಡಿಮೆ ಇದೆ ಎನ್ನುವುದು ಅರ್ಥವಾಗುತ್ತದೆ. ಅಷ್ಟೇ ಅಲ್ಲದೆ ದೇಶದ ಅನ್ನದಾತರ ಪ್ರತಿಭಟನೆ ಕುರಿತು ಮೌನವಾಗಿ ಇರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ರೈತರ ಪ್ರತಿಭಟನೆಯನ್ನು ಬೆಂಬಲಿಸುತ್ತಿರುವ ರಾಹುಲ್ ಗಾಂಧಿ, ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು ಪುನರುಚ್ಚರಿಸಿದ್ದು, ಕೃಷಿಯನ್ನು ಅವಲಂಬಿಸಿರುವ ಶೇಕಡಾ 60ರಷ್ಟು ಪಂಜಾಬ್, ಹರಿಯಾಣದ ರೈತರು ಜೀವನ ಸಾಗಿಸಲು ಕಷ್ಟಪಡುತ್ತಿದ್ದಾರೆ. ನೂತನ ಕೃಷಿ ಕಾಯ್ದೆಯು ರೈತರ ಮೇಲೆ ಮಾತ್ರವಲ್ಲದೆ ಮಧ್ಯಮ ವರ್ಗದ ಮೇಲಿನ ಆಕ್ರಮಣವೂ ಆಗಿದೆ” ಎಂದು ಹೇಳಿದ್ದಾರೆ.

http://ಉಳ್ಳಾಲ: ಸ್ವಾಮಿ ಕೊರಗಜ್ಜ ಮತ್ತು ಗುಳಿಗಜ್ಜನ ಕ್ಷೇತ್ರದ ಕಾಣಿಕೆ ಹುಂಡಿಯಲ್ಲಿ ಕಾಂಡಮ್‌ ಹಾಗೂ ಅವಹೇಳನಕಾರಿ ಬರಹ ಪತ್ತೆ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

9 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

9 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

9 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

14 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

14 hours ago