ಉಡುಪಿ

ಪ್ರಧಾನಿ ನರೇಂದ್ರ ಮೋದಿ ಅವರು ಮಾಡುವುದೆಲ್ಲ ಬಸವಣ್ಣ ಮತ್ತು ನಾರಾಯಣ ಗುರುಗಳ ಸಿದ್ಧಾಂತಕ್ಕೆ ವಿರುದ್ಧವಾದದ್ದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಬಸವಣ್ಣ ಮತ್ತು ನಾರಾಯಣ ಗುರುಗಳ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಮಾಡುವುದೆಲ್ಲ ಬಸವಣ್ಣ ಮತ್ತು ನಾರಾಯಣ ಗುರುಗಳ ಸಿದ್ಧಾಂತಕ್ಕೆ ವಿರುದ್ಧವಾದದ್ದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಪಡುಬಿದ್ರೆಯಲ್ಲಿ ನಡೆದ ಜನಾಶೀರ್ವಾದ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಬ್ಯಾಂಕುಗಳನ್ನು ಜನರ ಮನೆ ಬಾಗಿಲಿಗೆ ತಂದಿತು. ಹಳ್ಳಿಹಳ್ಳಿಗಳಲ್ಲಿ ಬ್ಯಾಂಕ್ ಶಾಖೆಗಳು ತೆರೆದವು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಬಂಡವಾಳಶಾಹಿಗಳು ಬ್ಯಾಂಕ್‌ಗಳನ್ನು ಲೂಟಿ ಮಾಡಿ ಪಲಾಯನ ಮಾಡುತ್ತಿದ್ದಾರೆ.

ರೈತರ ಸಾಲ ಮನ್ನ ಮಾಡಿ ಎಂದರೆ ಆ ವಿಷಯದ ಬಗ್ಗೆ ನಮಗೆ ಗೊತ್ತಿಲ್ಲ ಎಂದು ವಿತ್ತ ಸಚಿವರು ಹೇಳುತ್ತಾರೆ. ಆದರೆ ಕರ್ನಾಟಕ ರಾಜ್ಯ ರೈತರ 8 ಸಾವಿರ ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಿದೆ ಎಂದು ರಾಹುಲ್ ಹೇಳಿದರು.

 

ಬಿಜೆಪಿ ಎಲ್ಲೆಲ್ಲ ಹೋಗುತ್ತದೊ ಅಲ್ಲಿ ಅದು ಜನರ ನಡುವೆ ಹಗೆತನ ಬೆಳೆಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬಡ ಕುಟುಂಬಗಳಲ್ಲಿನ ಪ್ರತಿ ವ್ಯಕ್ತಿಗೂ 7 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ.

 

ಒಂದು ಕೋಟಿ ಕುಟುಂಬಗಳಿಗೆ ಇದರಿಂದ ಅನುಕೂಲವಾಗಿದೆ. ರಾಜ್ಯದಲ್ಲಿ ನೀರಾವರಿ ಯೋಜನೆಗಳಿಗೆ ಬಿಜೆಪಿ ಸರ್ಕಾರಕ್ಕಿಂತ ಮೂರು ಪಟ್ಟು ಹೆಚ್ಚು ಹಣವನ್ನು ಸಿದ್ದರಾಮಯ್ಯ ಸರ್ಕಾರ ವ್ಯಯಿಸಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

 

ಕಾಂಗ್ರೆಸ್ ಪಕ್ಷ ಭೇದ ಭಾವದ ಮೂಲಕ ಜನರನ್ನು ಬೇರೆ ಮಾಡುವುದಿಲ್ಲ. ದ್ವೇಷ, ಕೋಪವನ್ನು ಜನರ ಮಧ್ಯೆ ಹರಡುವುದಿಲ್ಲ. ಇದು ನಮಗೂ ಮತ್ತು ಬಿಜೆಪಿಗು ಇರುವ ವ್ಯತ್ಯಾಸ ಎಂದು ರಾಹುಲ್ ಗಾಂಧಿ ಹೇಳಿದರು.

ಕಾಂಗ್ರೆಸ್ ಪಕ್ಷ ಕಳೆದ 70 ವರ್ಷಗಳಲ್ಲಿ ಏನು ಮಾಡಿಲ್ಲ ಎಂದು ಹೇಳುವ ಮೂಲಕ ಈ ದೇಶದ ಜನತೆಗೆ ಅವಮಾನ ಮಾಡುತ್ತಿದೆ. ಈ ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷ ಮತ್ತು ಬಡ ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಮತ್ತು ಎಲ್ಲ ಜನರ ಅವಿರತ ಶ್ರಮದಿಂದ ಭಾರತ ವಿಶ್ವದ ದೊಡ್ಡ ರಾಷ್ಟ್ರಗಳ ಎದುರು ತಲೆ ಎತ್ತಿ ನಿಂತಿದೆ.

ಒಬ್ಬ ವ್ಯಕ್ತಿಯಿಂದ ದೇಶದ ಪ್ರಗತಿ ಸಾಧ್ಯವಿಲ್ಲ. ದೇಶದ 125 ಕೋಟಿ ಜನರೂ ಸಹ ಇದಕ್ಕೆ ಸಾಥ್ ನೀಡಬೇಕಾಗಿದೆ. ನರೇಂದ್ರ ಮೋದಿ ಈ ದೇಶದ ಜನರ ಬೆವರಿನ ದುಡಿಮೆಗೆ ಅವಮಾನ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

Vishwa News 24

Recent Posts

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

29 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

52 minutes ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

1 hour ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

1 hour ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

2 hours ago