ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ ಸಿಗಲಿಲ್ಲವೆಂದು ಮಾಜಿ ಸಿಎಂಎಸ್.ಎಂ.ಕೃಷ್ಣ ಅವರು ಮರಳಿ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹಬ್ಬಿರುವ ಹಿನ್ನಲೆಯಲ್ಲಿ ಇದೀಗ ಸ್ವತಃ ಎಸ್.ಎಂ.ಕೃಷ್ಣ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿ ಈ ವದಂತಿಗೆ ತೆರೆ ಎಳೆದಿದ್ದಾರೆ.
ಪ್ರಸ್ತುತ ಮುಂಬೈ ನಲ್ಲಿರುವ ಎಸ್.ಎಂ.ಕೃಷ್ಣ ಅವರು ದೂರವಾಣಿ ಮೂಲಕ ಖಾಸಗಿ ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿ,’ ಬಿಜೆಪಿಯಿಂದ ನನಗೆ ಅನ್ಯಾಯವಾಗಿದೆ. ಹಾಗಾಗಿ ನಾನು ಕಾಂಗ್ರೆಸ್ ಸೇರಲು ಮುಂದಾಗಿದ್ದೇನೆ. ಇದಕ್ಕೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿದ್ದಾರೆ ಎಂಬುದು ಗಾಳಿ ಸುದ್ದಿ.ಇದಕ್ಕೆಲ್ಲ ಯಾರೂ ಕಿವಿಗೊಡಬಾರದು’ ಎಂದು ಮನವಿ ಮಾಡಿದ್ದಾರೆ.
‘ಎಂತಹ ಸಂದರ್ಭದಲ್ಲೂ ಬಿಜೆಪಿ ಬಿಟ್ಟು ನಾನು ಕಾಂಗ್ರೆಸ್ಗೆ ಹೋಗುವುದಿಲ್ಲ. ನನ್ನ ಆರೋಗ್ಯ ಸಹಕರಿಸಿದರೆ ಈ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತೇನೆ. ಬಿಜೆಪಿಯಲ್ಲಿ ಎಲ್ಲ ಸರಿ ಇರುವಾಗ ಬೇರೆ ಪಕ್ಷವನ್ನು ಏಕೆ ಸೇರಬೇಕು. ನನ್ನ ಕುಟುಂಬದ ಯಾವುದೇ ಸದಸ್ಯರಿಗೆ ಟಿಕೆಟ್ ನೀಡಬೇಕೆಂದು ನಾನಾಗಲಿ ಅಥವಾ ಬೇರೆ ಯಾರೂ ಕೂಡ ಲಾಬಿ ನಡೆಸಿಲ್ಲ. ಅವರವರ ಸಾಮಥ್ರ್ಯಕ್ಕೆ ಅನುಗುಣವಾಗಿ ಪಕ್ಷದ ಮುಖಂಡರು ಟಿಕೆಟ್ ನೀಡುತ್ತಾರೆ. ನಮ್ಮ ಪುತ್ರಿ ಅಥವಾ ಬೇರೆ ಯಾರೇ ರಾಜಕೀಯಕ್ಕೆ ಬರುವುದು, ಬಿಡುವುದು ಅವರಿಗೆ ಬಿಟ್ಟ ವಿಷಯ. ಇದರಲ್ಲಿ ನಮ್ಮ ಪಾತ್ರ ಏನೂ ಇಲ್ಲ. ಕೆಲವು ಆಗದವರು ಆಗಾಗ್ಗೆ ಇಂತಹ ವದಂತಿಗಳನ್ನು ಹಬ್ಬಿಸುತ್ತಾರೆ. ಅದಕ್ಕೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಮೇಲೆ ನನಗೆ ಗುಲಗಂಜಿಯಷ್ಟು ಅಪನಂಬಿಕೆ ಇಲ್ಲ’ ಎಂದು ಎಸ್.ಎಂ.ಕೃಷ್ಣ ಅವರು ಸ್ಪಷ್ಟನೆ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…