Featured

ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂ ಕಾರ್ಯಕರ್ತರ ಶ್ರೇಯೋಭಿವೃದ್ಧಿಗಾಗಿ ಮಹಾರುದ್ರ ಯಾಗ ಸಂಪನ್ನ -Vishwanews24

ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದೂ ಕಾರ್ಯಕರ್ತರ ಶ್ರೇಯೋಭಿವೃದ್ಧಿಗಾಗಿ ಮಹಾರುದ್ರ ಯಾಗ ಸಂಪನ್ನ -Vishwanews24

ಟೀಮ್ ಮೋದಿ ಕಾಪು ವಲಯದ ವತಿಯಿಂದ ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ರವರ ನೇತೃತ್ವದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗೂ ಹಿಂದೂ ಕಾರ್ಯಕರ್ತರ ಶ್ರೇಯೋಭಿವೃದ್ಧಿಯೊಂದಿಗೆ ಲೋಕ ಕಲ್ಯಾಣಾರ್ಥದ ಸಂಕಲ್ಪದೊಂದಿಗೆ ಆಯೋಜಿಸಿದ್ದ ಮಹಾರುದ್ರ ಯಾಗ ಮಡುಂಬು‌ ಮಹಾಗಣಪತಿ ದೇವಸ್ಥಾನದಲ್ಲಿ ಸಂಪನ್ನಗೊಂಡಿತು.

ಜ್ಯೋತಿರ್ವಿದ್ವಾನ್ ಪ್ರಕಾಶ್ ಅಮ್ಮಣ್ಣಾಯ ರವರ ಮಾರ್ಗದರ್ಶನದಲ್ಲಿ, ಪುರೋಹಿತರಾದ ಶ್ರೀವತ್ಸ ಭಟ್ ಹಾಗೂ ಶ್ರೀ ಜನಾರ್ಧನ ತಂತ್ರಿ ನೇತೃತ್ವದಲ್ಲಿ ನಡೆದ ಮಹಾರುದ್ರ ಯಾಗದಲ್ಲಿ ಯಶ್ ಪಾಲ್ ಸುವರ್ಣ ಭಾಗಿಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ ಭಾರತದ ಪ್ರಧಾನಿಯಾಗಿ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಸಹಿತ ಇನ್ನಷ್ಟು ಕಾಲ ದೇಶ ಮುನ್ನಡೆಸುವಂತಾಗಲಿ ಹಾಗೂ ಸಮಸ್ತ ಹಿಂದೂ ಕಾರ್ಯಕರ್ತರ ಶ್ರೇಯೋಭಿವೃದ್ಧಿಯೊಂದಿಗೆ ಲೋಕ ಕಲ್ಯಾಣಾರ್ಥವಾಗಿ ಯಾಗವನ್ನು ನಡೆಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀಕಾಂತ ನಾಯಕ್ ಅಲೆವೂರು, ಶ್ರೀಮತಿ ನಯನ ಗಣೇಶ್, ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಶ್ರೀಮತಿ ಕೇಸರಿ ಯುವರಾಜ್, ಶ್ರೀಮತಿ ಮಾಲಿನಿ ಶೆಟ್ಟಿ, ಶ್ರೀಮತಿ ಸುಮಾ ಶೆಟ್ಟಿ, ಶ್ರೀಮತಿ ಮಂಜುಳಾ ಪ್ರಸಾದ್, ಟೀಮ್ ಮೋದಿ ಕಾಪು ವಲಯದ ಪ್ರಮುಖರಾದ ಶ್ರೀ ಯೋಗೀಶ್ ಪೂಜಾರಿ, ಶ್ರೀ ಬಾಲಕೃಷ್ಣ ಕಾಪು, ಶ್ರೀ ಅಶ್ವಿನ್, ಶ್ರೀ ಲಕ್ಷ್ಮೀಕಾಂತ್, ಶ್ರೀ ಸುವಿತ್, ಶ್ರೀ ನಾಗೇಶ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago