ವ್ಲಾದಿವೊಸ್ಟಾಕ್: ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸದ ವೇಳೆ ಭಾರತ ಮತ್ತು ರಷ್ಯಾ ನಡುವೆ 15 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ರಷ್ಯಾಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೊದಿ, ಅಲ್ಲಿನ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‍ರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಈ ವೇಳೆ ಉಭಯ ದೇಶಗಳ ನಡುವೆ ರಕ್ಷಣಾ ತಂತ್ರಜ್ಞಾನ ಸಹಕಾರ, ಇಂಧನ ಪೂರೈಕೆ ಸೇರಿದಂತೆ 15 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಪ್ರಮುಖವಾಗಿ ಭಾರತದ 20 ಕಡೆ ಅಣು ಸ್ಥಾವರ ಸ್ಥಾಪನೆ ಮಾಡುವ ಒಪ್ಪಂದಕ್ಕೆ ರಷ್ಯಾ ಸಹಿ ಹಾಕಿದ್ದು, ಇದಲ್ಲದೆ ರಕ್ಷಣೆ, ಶಿಕ್ಷಣ ಸೇರಿ 15 ಒಡಂಬಡಿಕೆಗಳಿಗೆ ಏರ್ಪಟ್ಟಿವೆ.
ಅಫ್ಘಾನಿಸ್ತಾನದಲ್ಲಿ ಶಾಂತಿ ಸ್ಥಾಪನೆ, ಕೊಲ್ಲಿ ರಾಷ್ಟ್ರಗಳ ಬಿಕ್ಕಟ್ಟಿನ ಬಗ್ಗೆಯೂ ಚರ್ಚೆ ನಡೆಸಿದರು. ಈ ವೇಳೆ 2019-2024ರವರೆಗೆ ತೈಲ, ನೈಸರ್ಗಿಕ ಅನಿಲ ಪರಿಶೊಧನೆ ಮತ್ತು ಖರೀದಿ ಕುರಿತಂತೆ ಐದು ವರ್ಷಗಳ ಮಾರ್ಗಸೂಚಿ ರೂಪಿಸುವ ಕುರಿತು ಉಭಯ ಮುಖಂಡರು ಮಾತುಕತೆ ನಡೆಸಿದರು.
ವಾಣಿಜ್ಯ, ಹೂಡಿಕೆ, ಗಣಿ, ಪರಮಾಣು ಇಂಧನ, ರಕ್ಷಣೆ ಮತ್ತು ಭದ್ರತೆ, ವಾಯು ಮತ್ತು ಸಮುದ್ರ ಮಾರ್ಗ ಸಂಪರ್ಕ, ಸಾರಿಗೆ ವ್ಯವಸ್ಥೆಯಲ್ಲಿ ಮೂಲಸೌಕರ್ಯ ಹೆಚ್ಚಳ, ಬಾಹ್ಯಾಕಾಶ, ಉಭಯ ದೇಶಗಳ ಜನರ ಸಂಪರ್ಕ ಕುರಿತೂ ಮಾತುಕತೆ ನಡೆಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…