ಬೆಂಗಳೂರು:ನೆರೆಯಿಂದ ಜನರ ಕಷ್ಟ ಕೇಳಲು ಪ್ರಧಾನಿ ಮೋದಿಯವರಿಗೆ ಸಮಯವಾಗಿಲ್ಲ. ಪರಿಹಾರವನ್ನು ಗಟ್ಟಿ ಧ್ವನಿಯಲ್ಲಿ ಕೇಳಲಾಗದಷ್ಟು ನಮ್ಮ ಮುಖ್ಯಮಂತ್ರಿಗಳು ದುರ್ಬಲವಾಗಿರುವುದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಸರಣಿ ಟ್ವೀಟ್‍ಗಳ ಮೂಲಕ ಬಿಜೆಪಿ ಸರ್ಕಾರವನ್ನು ಮತ್ತು ನಾಯಕರನ್ನು ತರಾಟೆಗೆತೆಗೆದುಕೊಂಡಿದ್ದಾರೆ.ಚಂದ್ರಯಾನ-2 ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಬಂದು ಇಸ್ರೋ ವಿಜ್ಞಾನಿಗಳಿಗೆ ಆತ್ಮಸ್ಥೈರ್ಯ ತುಂಬಿದ್ದು ಸ್ವಾಗತಾರ್ಹ.
ಆದರೆ ನೆರೆಯಿಂದ ತತ್ತರಿಸಿ ಬೀದಿಗೆ ಬಿದ್ದಿರುವ ಸಾವಿರಾರು ಕುಟುಂಬಗಳು ಮತ್ತು ಮಕ್ಕಳತ್ತ ತಿರುಗಿಯೂ ನೋಡದೆ, ಕೇಂದ್ರದಿಂದ ಯಾವುದೇ ಪರಿಹಾರ ಘೋಷಿಸದೆ ಹಾಗೆಯೇ ತೆರಳಿದ್ದು ನೋವಿನ ವಿಚಾರ ಎಂದಿದ್ದಾರೆ.
ಕೇಂದ್ರಸರ್ಕಾರದಿಂದ ಪರಿಹಾರವನ್ನು ಗಟ್ಟಿ ಧ್ವನಿಯಲ್ಲಿ ಕೇಳಲು ಸಾಧ್ಯವಾಗದಷ್ಟು ನಮ್ಮ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದುರ್ಬಲರಾಗಿರುವುದು ರಾಜ್ಯದ ದುರ್ದೈವ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟದ ಸಚಿವರು ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಬಡವರ ಕಷ್ಟಗಳನ್ನು ಕೇಳಿ ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಬೇಕಾದ ಸಂದರ್ಭದಲ್ಲಿ ಬೆಂಗಳೂರು ನಗರ ಪರಿವೀಕ್ಷಣೆ ಎಂಬ ನಾಟಕವಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…