Featured

ಪ್ರಧಾನಿ ಮಂಗಳೂರಿಗೆ – ಕಾರ್ಯಕ್ರಮಕ್ಕೆ ಕಪ್ಪು ಬಟ್ಟೆ, ಲೈಟರ್‌, ಬೆಂಕಿಪೊಟ್ಟಣ ನಿಷೇಧ : ಎಡಿಜಿಪಿ ಅಲೋಕ್‌ ಕುಮಾರ್ ಖಡಕ್ ಸೂಚನೆ – VIshwanews24

ಪ್ರಧಾನಿ ಮಂಗಳೂರಿಗೆ – ಕಾರ್ಯಕ್ರಮಕ್ಕೆ ಕಪ್ಪು ಬಟ್ಟೆ, ಲೈಟರ್‌, ಬೆಂಕಿಪೊಟ್ಟಣ ನಿಷೇಧ : ಎಡಿಜಿಪಿ ಅಲೋಕ್‌ ಕುಮಾರ್ ಖಡಕ್ ಸೂಚನೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮಂಗಳೂರು ಭೇಟಿ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಸಂಪೂರ್ಣ ಬಂದೋ ಬಸ್ತ್‌ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶುಕ್ರವಾರ ಮಂಗಳೂರಿನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ಹಿನ್ನೆಲೆ ಕಾರ್ಯಕ್ರಮಕ್ಕೆ ಬರುವವರು ಲೈಟರ್‌, ಮ್ಯಾಚ್‌ಬಾಕ್ಸ್‌, ಭಿತ್ತಿಪತ್ರ, ಬಾಟಲಿ, ಕಪ್ಪು ಬಟ್ಟೆ ತರಬಾರದು ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಎಂಪಿಎ, ಸಾರ್ವಜನಿಕ ಸಭೆ, ಪಕ್ಷದ ಸಭೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಬಂದೋಬಸ್ತ್‌ ಕ್ರಮಗಳ ಮೇಲ್ವಿಚಾರಣೆ ನಡೆಸಲು ಮಂಗಳೂರಿನಲ್ಲಿರುವ ಎಡಿಜಿಪಿ ಅಲೋಕ್‌ ಕುಮಾರ್‌, ಪೊಲೀಸರಿಗೆ ನಿರ್ದೇಶನ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ‘ಪ್ರಧಾನಿ ಆಗಮನ ಹಿನ್ನೆಲೆ ಕಾರ್ಯಕ್ರಮದಲ್ಲಿ ಭಾಗಿಯಾಗುವವರು ಕಪ್ಪು ಟಿ ಶರ್ಟ್‌ ಧರಿಸಬಾರದು. ಅದನ್ನು ದುರುಪಯೋಗಪಡಿಸುವ ಸಾಧ್ಯತೆ ಇದೆ ಎಂದು ಈ ಮೂಲಕ ಸೂಚನೆ ನೀಡಲಾಗುತ್ತಿದೆ. ಹೆಲಿಪ್ಯಾಡ್‌ನಿಂದ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸಾರ್ವಜನಿಕರು ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಅನುಕೂಲವಾಗುವಂತೆ ಕ್ರಮ ವಹಿಸಲಾಗಿದೆ. ತುರ್ತು ಮಾರ್ಗಗಳು ಸೇರಿದಂತೆ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಎಡಿಜಿಪಿ ತಿಳಿಸಿದರು.  ಇಂದು ಪ್ರಧಾನಿ ಮಂಗಳೂರಿಗೆ- ತುಳು ಭಾಷೆ ಮಾನ್ಯತೆಗೆ 50 ಸಾವಿರಕ್ಕೂ ಅಧಿಕ ಟ್ವೀಟ್‌ – Vishwanews24

ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ನೇತೃತ್ವದಲ್ಲಿ ಮಂಗಳೂರು ಪೊಲೀಸ್‌, ಹೊರ ಜಿಲ್ಲೆಯಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ, 13 ಕೆಎಸ್‌ಆರ್‌ಪಿ ಪ್ಲಟೂನ್‌, ಒಂದು ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್‌ ಕಂಪನಿ)ಗರುಡ ಪಡೆ, ಎಎನ್‌ಎಫ್‌ ತಂಡವನ್ನು ತರಿಸಿದ್ದೇವೆ. ನಗರದ ಮೂವರು ಡಿಸಿಪಿಗಳು, ಅಲ್ಲದೇ, ಹೊರ ಜಿಲ್ಲೆಗಳಿಂದ ಐದು ಮಂದಿ ಎಸ್ಪಿಗಳು, 15 ಮಂದಿ ಡಿವೈಎಸ್ಪಿಗಳು, 35 ಮಂದಿ ಇನ್‌ಸ್ಪೆಕ್ಟರ್‌ಗಳು, ಮೂರು ಸಾವಿರ ಸಿಬ್ಬಂದಿಯನ್ನು ಕರೆಸಲಾಗಿದೆ. ಜೊತೆಗೆ ಸಂಪೂರ್ಣ ಸಿಸಿಟಿವಿ ಕ್ಯಾಮೆರಾದ ಮೂಲಕ ಕಣ್ಗಾವಲು ಇರಿಸಲಾಗಿದೆ ಎಂದು ಅವರು ಹೇಳಿದರು.

ಕರಾವಳಿ ಅಭಿವೃದ್ಧಿಗೆ ಅತ್ಯಂತ ದೊಡ್ಡ ಶಕ್ತಿಯನ್ನು ಪ್ರಧಾನ ಮಂತ್ರಿಗಳು ತುಂಬಲಿದ್ದಾರೆ :ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ – Vishwanews24

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

20 hours ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

20 hours ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

21 hours ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

21 hours ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

22 hours ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

23 hours ago