ವಿಜಯಪುರ: ರಾಜ್ಯದ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಪ್ರಧಾನಿ ಮನಸ್ಸು ಮಾಡಿದರೆ ನಾನೇ ಮುಂದಿನ ಮುಖ್ಯಮಂತ್ರಿ ಆಗುತ್ತೇನೆ. ಚುನಾವಣೆಯ ನೇತೃತ್ವವನ್ನು ನನಗೆ ಕೊಟ್ಟರೆ 130 ಸೀಟ್ ತರುವ ತಾಕತ್ತು ನನಗಿದೆ. ಈ ರಾಜ್ಯದ ಹೊಸ ನಾಯಕನಾಗುವ ಎಲ್ಲಾ ಸಾಮರ್ಥ್ಯ ನನಗಿದೆ” ಎಂದು ಯತ್ನಾಳ್ ಅವರು ಹೇಳಿದ್ದಾರೆ.
“ಹೈಕಮಾಂಡ್ ಒಪ್ಪಿದರೆ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ನಾನ್ಯಾಕೆ ಮುಖ್ಯಮಂತ್ರಿ ಆಗಬಾರದಾ? ನನ್ನ ಮೇಲೆ ಗಣಿ, ಅಕ್ರಮ ಆಸ್ತಿ, ಜಾತಿ ಆರೋಪ ಹೀಗೆ ನನ್ನ ಇಡೀ ರಾಜಕೀಯ ಜೀವನದಲ್ಲಿ ನನ್ನ ವಿರುದ್ಧ ಒಂದೇ ಒಂದು ಭ್ರಷ್ಟಾಚಾರದ ಆರೋಪವಿಲ್ಲ” ಎಂದು ತಿಳಿಸಿದ್ದಾರೆ.
“ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವೂ 130 ಸೀಟು ಗೆಲ್ಲುವಂತೆ ಮಾಡುವ ತಾಕತ್ತು ನನ್ನಲ್ಲಿದೆ. ಹೈಕಮಾಂಡ್ ನನಗೆ ನೇತೃತ್ವ ಕೊಟ್ಟರೆ ನಾನು ಚುನಾವಣೆ ಹೊಣೆಗಾರಿಕೆ ಹೊತ್ತು 130 ಸೀಟು ಗೆಲ್ಲಿಸುತ್ತೇನೆಂದು” ಇದೇ ವೇಳೆ ತಿಳಿಸಿದ್ದಾರೆ.
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…