ಪ್ರಧಾನಿ ಮೋದಿಗೆ ಗ್ಲೋಬಲ್ ಗೋಲ್​ಕೀಪರ್ ಪ್ರಶಸ್ತಿ ಪ್ರಧಾನ -Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ನ್ಯೂಯಾರ್ಕ್: ಬಿಲ್ ಆ್ಯಂಡ್ ಮೆಲಿಂಡಾ ಗೇಟ್ಸ್​ ಫೌಂಡೇಷನ್ ನೀಡುವ ಪ್ರತಿಷ್ಠಿತ “ಗ್ಲೋಬಲ್ ಗೋಲ್ಕಪರ್” ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿಗೆ ಪ್ರಧಾನ ಮಾಡಲಾಗಿದೆ.

ಜನರಲ್ಲಿ ಸ್ವಚ್ಚತೆಯ ಅರಿವು ಮೂಡಿಸಲು ಪ್ರಧಾನಿ ಮೋದಿ 2014 ರಲ್ಲಿ ಸ್ಚಚ್ಚಭಾರತ ಅಭಿಯಾನಕ್ಕೆ ಪ್ರಶಸ್ತಿ ನೀಡಲಾಗಿದೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕಕ್ಕೆ ಆಗಮಿಸಿರುವ ಅವರಿಗೆ ಮೈಕ್ರೋಸಾಫ್ಟ್​ ಸಂಸ್ಥಾಪಕ ಬಿಲ್ ​ಗೇಟ್ಸ್​ ಪ್ರಶಸ್ತಿ ಪ್ರಧಾನ ಮಾಡಿದರು.

ಮಹಾತ್ಮ ಗಾಂಧಿ ಅವರ 150 ನೇ ಜನ್ಮದಿನ ಆಚರಣೆ ವರ್ಷದಲ್ಲಿ ಪ್ರಶಸ್ತಿ ದೊರೆತಿರುವುದು ವೈಯುಕ್ತಿಕವಾಗಿ ಮಹತ್ವಪೂರ್ಣವಾಗಿದೆ. 130 ಕೋಟಿ ಜನ ಪ್ರತಿಜ್ಞೆ ಮಾಡಿದಾಗ ಯಾವುದೇ ಸವಾಲನ್ನು ಮೆಟ್ಟಿನಿಲ್ಲಬಹುದು. ರಾಷ್ಟ್ರದ ಜನತೆ ಸ್ವಚ್ಚಭಾರತ ಅಭಿಯಾನದಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಪ್ರಶಸ್ತಿಯನ್ನು ದೇಶದ ಜತೆಗೆ ಅರ್ಪಿಸುವುದಾಗಿ ಪ್ರಧಾನಿ ಮೋದಿ ಹೇಳಿದರು.

ಸ್ವಚ್ಛ ಭಾರತದ ಯಶಸ್ಸಿಗೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ಹೆಚ್ಚು ಕೈ ಜೋಡಿಸಿದ್ದಾರೆ. ಇದು ಅವರ ಕೊಡುಗೆ, ಆದ್ದರಿಂದ ಹೆಚ್ಚು ಸಂತೋಷವಾಗಿದೆ. ಅಷ್ಟೇ ಅಲ್ಲ, ಸ್ವಚ್ಛ ಭಾರತ ಅಭಿಯಾನವನ್ನು ‘ಜನರ ಚಳವಳಿ‘ಯಾಗಿ ಪರಿವರ್ತಿಸಿದ ಭಾರತೀಯರು, ನಿತ್ಯದ ಜೀವನದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದರು. ಆದ್ದರಿಂದ, ಈ ಪ್ರಶಸ್ತಿಯನ್ನು ದೇಶದ ಜರಿಗೆ ಸಮರ್ಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನು, ಗೇಟ್ಸ್‌ ಪ್ರತಿಷ್ಠಾನ ನೀಡಿರುವ ‘ಜಾಗತಿಕ ಗೋಲ್‌ಕೀಪರ್‌‘ ಪ್ರಶಸ್ತಿಯನ್ನು ಭಾರತದ 130 ಕೋಟಿ ಜನರಿಗೆ ಮತ್ತು ಸ್ಚಚ್ಛತೆಗಾಗಿ ನಡೆದ ರಾಷ್ಟ್ರದ ಸಾಮೂಹಿಕ ಕಾರ್ಯಗಳಿಗೆ ಸಮರ್ಪಿಸುತ್ತೇನೆ ಎಂದು ಹೇಳಿದರು.