ನ್ಯೂಯಾರ್ಕ್: ಬಿಲ್ ಆ್ಯಂಡ್ ಮೆಲಿಂಡಾ ಗೇಟ್ಸ್ ಫೌಂಡೇಷನ್ ನೀಡುವ ಪ್ರತಿಷ್ಠಿತ “ಗ್ಲೋಬಲ್ ಗೋಲ್ಕಪರ್” ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿಗೆ ಪ್ರಧಾನ ಮಾಡಲಾಗಿದೆ.
ಜನರಲ್ಲಿ ಸ್ವಚ್ಚತೆಯ ಅರಿವು ಮೂಡಿಸಲು ಪ್ರಧಾನಿ ಮೋದಿ 2014 ರಲ್ಲಿ ಸ್ಚಚ್ಚಭಾರತ ಅಭಿಯಾನಕ್ಕೆ ಪ್ರಶಸ್ತಿ ನೀಡಲಾಗಿದೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕಕ್ಕೆ ಆಗಮಿಸಿರುವ ಅವರಿಗೆ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಪ್ರಶಸ್ತಿ ಪ್ರಧಾನ ಮಾಡಿದರು.
ಮಹಾತ್ಮ ಗಾಂಧಿ ಅವರ 150 ನೇ ಜನ್ಮದಿನ ಆಚರಣೆ ವರ್ಷದಲ್ಲಿ ಪ್ರಶಸ್ತಿ ದೊರೆತಿರುವುದು ವೈಯುಕ್ತಿಕವಾಗಿ ಮಹತ್ವಪೂರ್ಣವಾಗಿದೆ. 130 ಕೋಟಿ ಜನ ಪ್ರತಿಜ್ಞೆ ಮಾಡಿದಾಗ ಯಾವುದೇ ಸವಾಲನ್ನು ಮೆಟ್ಟಿನಿಲ್ಲಬಹುದು. ರಾಷ್ಟ್ರದ ಜನತೆ ಸ್ವಚ್ಚಭಾರತ ಅಭಿಯಾನದಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಪ್ರಶಸ್ತಿಯನ್ನು ದೇಶದ ಜತೆಗೆ ಅರ್ಪಿಸುವುದಾಗಿ ಪ್ರಧಾನಿ ಮೋದಿ ಹೇಳಿದರು.
ಸ್ವಚ್ಛ ಭಾರತದ ಯಶಸ್ಸಿಗೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ಹೆಚ್ಚು ಕೈ ಜೋಡಿಸಿದ್ದಾರೆ. ಇದು ಅವರ ಕೊಡುಗೆ, ಆದ್ದರಿಂದ ಹೆಚ್ಚು ಸಂತೋಷವಾಗಿದೆ. ಅಷ್ಟೇ ಅಲ್ಲ, ಸ್ವಚ್ಛ ಭಾರತ ಅಭಿಯಾನವನ್ನು ‘ಜನರ ಚಳವಳಿ‘ಯಾಗಿ ಪರಿವರ್ತಿಸಿದ ಭಾರತೀಯರು, ನಿತ್ಯದ ಜೀವನದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದರು. ಆದ್ದರಿಂದ, ಈ ಪ್ರಶಸ್ತಿಯನ್ನು ದೇಶದ ಜರಿಗೆ ಸಮರ್ಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ನಾನು, ಗೇಟ್ಸ್ ಪ್ರತಿಷ್ಠಾನ ನೀಡಿರುವ ‘ಜಾಗತಿಕ ಗೋಲ್‌ಕೀಪರ್‘ ಪ್ರಶಸ್ತಿಯನ್ನು ಭಾರತದ 130 ಕೋಟಿ ಜನರಿಗೆ ಮತ್ತು ಸ್ಚಚ್ಛತೆಗಾಗಿ ನಡೆದ ರಾಷ್ಟ್ರದ ಸಾಮೂಹಿಕ ಕಾರ್ಯಗಳಿಗೆ ಸಮರ್ಪಿಸುತ್ತೇನೆ ಎಂದು ಹೇಳಿದರು.
ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…
ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…
ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂದಾಗಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ…
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ…
ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…
ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…