Featured

ಪ್ರಧಾನಿ ಮೋದಿಗೆ ದಕ್ಷಿಣ ಕೊರಿಯಾದ ಪ್ರತಿಷ್ಠಿತ 2018ರ ಸಿಯೋಲ್ ಶಾಂತಿ ಪ್ರಶಸ್ತಿ

ನವದೆಹಲಿ:ಅಂತಾರಾಷ್ಟ್ರೀಯ ಸಹಕಾರ ವೃದ್ದಿ ಹಾಗೂ ಪ್ರಾದೇಶಿಕ ಮತ್ತು ಜಾಗತಿಕ ಶಾಂತಿ ವೃದ್ದಿಗಾಗಿ ಮಹತ್ವದ ಕೊಡುಗೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಾಧನೆಯನ್ನು ಪರಿಗಣಿಸಿ ದಕ್ಷಿಣ ಕೊರಿಯಾ ಪ್ರತಿಷ್ಠಿತ 2018ರ ಸಿಯೋಲ್ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪರಿಸರ ಸಂರಕ್ಷಣೆಗೆ ನೀಡಿದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ವಿಶ್ವಸಂಸ್ಥೆಯ ಚಾಂಪಿಯನ್ಸ್ ಆಫ್ ದಿ ಅರ್ಥ್ ಪ್ರಶಸ್ತಿ ಪುರಸ್ಕಾರಕ್ಕೆ ಮೋದಿ ಭಾಜನರಾದ ಬೆನ್ನಲ್ಲೇ ಏಷ್ಯಾ ಖಂಡದ ಮತ್ತೊಂದು ಅತ್ಯುನ್ನತ ಗೌರವಕ್ಕೆ ಪ್ರಧಾನಿ ಪಾತ್ರರಾಗಲಿದ್ದಾರೆ.

ಅಂತಾರಾಷ್ಟ್ರೀಯ ಸಹಕಾರ ಸುಧಾರಣೆ, ಜಾಗತಿಕ ಆರ್ಥಿಕ ಪ್ರಗತಿ ಉನ್ನತೀಕರಣ, ವಿಶ್ವದ ಕ್ಷಿಪ್ರ ಬೆಳವಣಿಗೆಯ ಬೃಹತ್ ಆರ್ಥಿಕತೆಯಲ್ಲಿ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುವ ಮೂಲಕ ಭಾರತೀಯರ ಮಾನವ ಸಂಪನ್ಮೂಲ ಅಭಿವೃದ್ದಿಗೆ ಚಾಲನೆ ಹಾಗೂ ಭ್ರಷ್ಟಾಚಾರ ನಿಗ್ರಹ ಮತ್ತು ಸಾಮಾಜಿಕ ಏಕತೆಗಾಗಿ ಮೋದಿ ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಸಿಯೋಲ್ ಪೀಸ್ ಪ್ರೈಜ್ ಕಮಿಟಿ ಈ ಪ್ರಶಸ್ತಿ ನೀಡಲು ನಿರ್ಧರಿಸಿದೆ.

ಸಿರಿವಂತರು ಮತ್ತು ಬಡವರ ನಡುವೆ ಸಾಮಾಜಿಕ ಮತ್ತು ಆರ್ಥಿಕ ತಾರತಮ್ಯ ಕಡಿಮೆ ಮಾಡಲು ಮೋದಿನೋಮಿಕ್ಸ್ (ಮೋದಿ ಆರ್ಥಿಕ ಸೂತ್ರ) ಜಾರಿಗೊಳಿಸಿ ಭಾರತೀಯ ಮತ್ತು ಜಾಗತಿಕ ಆರ್ಥಿಕತೆ ಬೆಳವಣಿಗೆಗೆ ಪ್ರಧಾನಿ ಅವರು ಗಮನಾರ್ಹ ಕೊಡಗೆ ನೀಡಿದ್ದಾರೆ. ಇದನ್ನು ಪ್ರಶಸ್ತಿ ಸಮಿತಿ ಪರಿಗಣಿಸಿ 2018ರ ಸಿಯೋಲ್ ಶಾಂತಿ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರವೀಶ್‍ಕುಮಾರ್ ಟ್ವಿಟ್ಟರ್‍ನಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago