Featured

ಪ್ರಧಾನಿ ಮೋದಿಗೆ ದೇವೇಗೌಡರೆ ಪ್ರಬಲ ಎದುರಾಳಿ ; ಅವರೇ ಏಕೆ ಮುಂದಿನ ಪ್ರಧಾನಿಯಾಗಬಾರದು?: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಮೈಸೂರು :ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೆ ಪ್ರಬಲ ಎದುರಾಳಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀರ್ಘ ರಾಜಕೀಯ ಇತಿಹಾಸ ಹೊಂದಿರುವ ಎಚ್.ಡಿ. ದೇವೇಗೌಡ ಅವರ ರಾಜಕೀಯ ಅನುಭವವನ್ನು ಗಮನಿಸಿದರೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರಿಗೆ ದೇವೇಗೌಡರೆ ಪರ್ಯಾಯ ನಾಯಕ ಎಂಬುದಲ್ಲಿ ಯಾವುದೇ ಉತ್ಪ್ರೇಕ್ಷೆ ಇಲ್ಲ. ದೇವೇಗೌಡರೆ ಏಕೆ ಮುಂದಿನ ಪ್ರಧಾನಿಯಾಗಬಾರದು ಎಂದು ಪ್ರಶ್ನಿಸಿದರು.

ಇದೀಗ ಪ್ರಾಂತಿಯ ಪಕ್ಷಗಳು ಒಟ್ಟಾಗಿ ದೇಶದ ಚುಕ್ಕಾಣಿ ಹಿಡಿಯುವ ಕಾಲ ಬಂದಿದೆ. ಪ್ರಾಂತಿಯ ಪಕ್ಷಗಳೊಂದಿಗೆ ಸೇರಿ ರಾಷ್ಟ್ರೀಯ ಪಕ್ಷಗಳು ಅಧಿಕಾರ ಹಿಡಿಯುತ್ತಿವೆ. ಆಂಧ್ರಪ್ರದೇಶ, ತೆಲಂಗಾಣ, ಮಧ್ಯ ಈಶಾನ್ಯ ಭಾಗದಲ್ಲಿಯೂ ಪ್ರಾದೇಶಿಕ ಪಕ್ಷಳ ಪ್ರಾಬಲ್ಯವಿದೆ.ಇದನ್ನು ಗಮನಿಸಿದರೆ ಇಂದಿನ ರಾಜಕೀಯ ಪ್ರಾಂತೀಯ ಪಕ್ಷಗಳ ಕಡೆ ವಾಲಿರುವುದು ತಿಳಿಯುತ್ತದೆ.

ಪ್ರಾದೇಶಿಕ ಪಕ್ಷಗಳಿಗೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಅರಿವಿರುತ್ತದೆ. ಹಾಗಾಗಿ ಅವರು ಅತ್ಯಂತ ಪರಿಣಾಮಕಾರಿಯಾಗಿ ಆ ಸಮಸ್ಯೆ ಬಗೆಹರಿಸುತ್ತಾರೆ. ಇದೇ ಕಾರಣಕ್ಕೆ ಕಾವೇರಿ ಸಮಸ್ಯೆ ಉದ್ಬವವಾದಾಗ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಹುಡುಕಿಕೊಂಡು ಬಂದರು. ಸ್ಥಳೀಯ ಸಮಸ್ಯೆಗಳ ಕುರಿತು ಪ್ರಾಂತೀಯ ಪಕ್ಷಗಳಿಗಿರುವ ಆಳವಾದ ಅರಿವನ್ನು ಗಮನಿಸಿಯೆ ಜನರು ಸ್ಥಳೀಯ ಪಕ್ಷಗಳಿಗೆ ಒಲವು ತೋರುತ್ತಿದ್ದಾರೆ. ಹಾಗಾಗಿ ಈ ಪಕ್ಷಗಳು ಮತ್ತಷ್ಟು ದೊಡ್ಡ ಪ್ರಮಾಣದಲ್ಲಿ ಒಗ್ಗೂಡಿ ದೇಶದ ಆಡಳಿತ ಚಕ್ಕಾಣಿ ಹಿಡಿಯುವ ಕಾಲ ಬಂದಿದೆ. ಈ ಕಾರ್ಯದಲ್ಲಿ ಮುಂದಾಳತ್ವ ವಹಿಸುವ ಶಕ್ತಿ ಎಚ್.ಡಿ.ದೇವೇಗೌಡ ಅವರಿಗೆ ಇದೆ. ಹಾಗಾಗಿ ಇವರೆ ಹಾಲಿ ಪ್ರಧಾನಿ ನರೇಂದ್ರಮೋದಿ ಅವರಿಗೆ ಪ್ರಬಲ ಎದುರಾಳಿ ಆಗಲಿದ್ದಾರೆ ಎಂದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

11 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

13 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

13 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

13 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

14 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

14 hours ago