Featured

ಪ್ರಧಾನಿ ಮೋದಿಗೆ ಮತ್ತೆ ಮೈಸೂರಿಗೆ ಭೇಟಿ ನೀಡುವಂತೆ ಆಹ್ವಾನ ನೀಡಿದ ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ – Vishwanews24

ಪ್ರಧಾನಿ ಮೋದಿಗೆ ಮತ್ತೆ ಮೈಸೂರಿಗೆ ಭೇಟಿ ನೀಡುವಂತೆ ಆಹ್ವಾನ ನೀಡಿದ ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ – Vishwanews24

ಮೈಸೂರು: ಬಿಜೆಪಿ, ಮೋದಿ ಎಂದರೆ ಕಿಡಿ ಕಾರುತ್ತಿದ್ದ ಕಾಂಗ್ರೆಸ್‌ ಮಾಜಿ ಸಂಸದೆ, ಸ್ಯಾಂಡಲ್‌ವುಡ್‌ ಸ್ಟಾರ್‌ ನಟಿ ರಮ್ಯಾ ಇದೀಗ ತಮ್ಮ ಟ್ವೀಟ್‌ ಮೂಲಕ ಎಲ್ಲರಿಗೂ ಅಚ್ಚರಿ ಕೊಟ್ಟಿದ್ದಾರೆ. ಈಗಾಗಲೇ ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಿ ಹಿಂತಿರುಗಿರುವ ಪ್ರಧಾನಿ ಮೋದಿಗೆ ಮತ್ತೆ ಬರುವಂತೆ ಆಮಂತ್ರಣ ನೀಡಿರುವ ರಮ್ಯಾ, ಈ ಮೂಲಕ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರನ್ನು ಗೊಂದಲಕ್ಕೀಡು ಮಾಡಿದ್ದಾರೆ.

ಟ್ವೀಟ್‌ನಲ್ಲೇನಿದೆ?

ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದ ಹಿನ್ನೆಲೆಯಲ್ಲಿ ರಮ್ಯಾ ಈ ಟ್ವೀಟ್‌ ಮಾಡಿದ್ದಾರೆ. ಅಷ್ಟಕ್ಕೂ ಟ್ವೀಟ್‌ನಲ್ಲಿ ರಮ್ಯಾ ಏನು ಹೇಳಿದ್ದಾರೆ ಎಂದು ನೋಡುವುದಾದರೆ,  ‘ನಮ್ಮ ಮೈಸೂರಿಗೆ’ ಸ್ವಾಗತ ಪ್ರಧಾನಿ ನರೇಂದ್ರ ಮೋದಿಯವರೇ.. ಎಂದು ಸ್ವಾಗತಿಸಿದ್ದಾರೆ. ಮುಂದುವರೆಸಿ ಬರೆದಿರುವ ರಮ್ಯಾ, ಸಮಯವಿದ್ದರೆ ಮೈಸೂರಿನಲ್ಲಿ ಮಾಡಬೇಕಾದ ಕೆಲಸಗಳ ಪಟ್ಟಿ ಎಂದು ನಮೂದಿಸಿರುವ ರಮ್ಯಾ ಇಲ್ಲಿನ ರಸ್ತೆಗಳನ್ನು ಉದ್ಘಾಟಿಸಿ, ಇದರ ಅಗತ್ಯ ನಮಗೆ ಬಹಳಷ್ಟಿದೆ. ಇದನ್ನು ಕಲ್ಪಿಸಿದ ಸಚಿವ ನಿತಿನ್ ಗಡ್ಕರಿಗೆ ಧನ್ಯವಾದ ಎಂದೂ ಹೇಳಿದ್ದಾರೆ.

ಇದೇ ವೇಳೆ ಮೈಸೂರಿನ ಜನಪ್ರಿಯ ಮೈಲಾರಿ ಬೆಣ್ಣೆ ದೋಸೆ ರುಚಿಯನ್ನೂ ಸವಿಯಿರಿ, ಇದು ಬಹಳ ಮೃದುವಾದ ದೋಸೆ ಕೂಡಾ ಹೌದು ಎಂದು ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿರುವ ರಮ್ಯಾ ನೀವು ಮೈಸೂರಿನ ಆರ್ಕೆಸ್ಟ್ರಾ ಸಂಸ್ಕೃತಿಯನ್ನು ವೀಕ್ಷಿಸಬಹುದು, ಸಾಧ್ಯವಾಗದಿದ್ದರೆ ಮೈಸೂರಿನ ಯುವ ಪ್ರತಿಭಾವಂತ ಮೈಸೂರಿಯನ್ನರು ಮಾಡಿದ ಆರ್ಕೆಸ್ಟ್ರಾದ ಟ್ರೈಲರ್ ವೀಕ್ಷಿಸಬಹುದು ಎಂದು, ಈ ಸಿನಿಮಾವನ್ನೂ ಪ್ರೊಮೋಟ್‌ ಮಾಡಿದ್ದಾರೆ.

ತಮ್ಮ ಪಟ್ಟಿಯನ್ನು ಪೂರ್ಣಗೊಳಿಸಿದ ರಮ್ಯಾ, ಈ ಪಟ್ಟಿಗೆ ನೀವೇನಾದರೂ ಸೇರಿಸಲು ಇಚ್ಛಿಸಿದರೆ ಕಮೆಂಟ್‌ ಮಾಡಿ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿಗೆ ಮತ್ತೆ ಮೈಸೂರಿಗೆ ಭೇಟಿ ನೀಡುವಂತೆಯೂ ಆಹ್ವಾನ ನೀಡಿದ್ದಾರೆ ಸ್ಯಾಂಡಲ್‌ವುಡ್‌ ಕ್ವೀನ್.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

8 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

9 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

9 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

10 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

11 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

11 hours ago