Featured

ಪ್ರಧಾನಿ ಮೋದಿಗೆ 75ನೇ ಹುಟ್ಟುಹಬ್ಬದ ಸಂಭ್ರಮ – vishwanews24

ಪ್ರಧಾನಿ ಮೋದಿಗೆ 75ನೇ ಹುಟ್ಟುಹಬ್ಬದ ಸಂಭ್ರಮ : ಕರೆ ಮಾಡಿ ಶುಭಾಶಯ ತಿಳಿಸಿದ ಟ್ರಂಪ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (ಸೆ.17) 75ನೇ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಫೋನ್‌ ಕರೆ ಮಾಡಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಟ್ರಂಪ್‌ ಶುಭಾಶಯಕ್ಕೆ ಮೋದಿ ಧನ್ಯವಾದ ತಿಳಿಸಿದ್ದಾರೆ. ಭಾರತ-ಅಮೆರಿಕ ಸಂಬಂಧಗಳನ್ನು ಉತ್ತಮಗೊಳಿಸುವ ಬದ್ಧತೆ ಮತ್ತು ಉಕ್ರೇನ್ ಸಂಘರ್ಷವನ್ನು ಶಾಂತಿಯುತವಾಗಿ ಪರಿಹರಿಸುವ ನಿಟ್ಟಿನಲ್ಲಿ ಅಮೆರಿಕದ ನಿಲುವಿಗೆ ಬೆಂಬಲ ವ್ಯಕ್ತಪಡಿಸುವುದಾಗಿ ಪ್ರಧಾನಿ ಒತ್ತಿ ಹೇಳಿದ್ದಾರೆ.

ನಿಮ್ಮಂತೆಯೇ ನಾನು ಕೂಡ ಭಾರತ-ಯುಎಸ್ ಸಮಗ್ರ ಮತ್ತು ಜಾಗತಿಕ ಸಹಭಾಗಿತ್ವವನ್ನು ಎತ್ತರಕ್ಕೆ ಕೊಂಡೊಯ್ಯಲು ಸಂಪೂರ್ಣವಾಗಿ ಬದ್ಧನಾಗಿದ್ದೇನೆ. ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರದತ್ತ ನಿಮ್ಮ ಉಪಕ್ರಮಗಳನ್ನು ನಾವು ಬೆಂಬಲಿಸುತ್ತೇವೆ ಎಂದು ಪ್ರಧಾನಿ ಮೋದಿ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಟ್ರಂಪ್ ಟ್ರೂತ್ ಸೋಶಿಯಲ್ ಪೋಸ್ಟ್‌ನಲ್ಲಿ, ಪ್ರಧಾನಿ ಮೋದಿಯವರೊಂದಿಗೆ ಸಂಭಾಷಣೆ ಅದ್ಭುತವಾಗಿತ್ತು. ಉಕ್ರೇನ್-ರಷ್ಯಾ ಯುದ್ಧವನ್ನು ಪರಿಹರಿಸುವಲ್ಲಿ ಅಮೆರಿಕದ ಉಪಕ್ರಮಗಳಿಗೆ ಭಾರತದ ಬೆಂಬಲಕ್ಕಾಗಿ ಮೋದಿ ಅವರನ್ನು ಶ್ಲಾಘಿಸುತ್ತೇನೆಂದು ತಿಳಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಮೋದಿಯವರೊಂದಿಗೆ ಮಾತನಾಡಲು ಎದುರು ನೋಡುತ್ತಿರುವುದಾಗಿ ಅಮೆರಿಕದ ಅಧ್ಯಕ್ಷ ತಿಳಿಸಿದ್ದಾರೆ. ಎರಡೂ ಕಡೆಯವರು ಪ್ರಸ್ತಾವಿತ ವ್ಯಾಪಾರ ಒಪ್ಪಂದವನ್ನು ಮುಕ್ತಾಯಗೊಳಿಸಲು ಸಾಧ್ಯವಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

13 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

35 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago