ಕೊಲ್ಕತ್ತ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಹಾಗೂ ಎನ್ ಡಿಎ ಸರ್ಕಾರವನ್ನು ಅಸ್ಥಿರಗೊಳಿಸುವುದು ನಮ್ಮ ಮುಖ್ಯ ಗುರಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪ್ರಧಾನಿ ಹುದ್ದೆಯಿಂದ ಮೋದಿಯನ್ನು ಕೆಳಗಿಳಿಸಲು ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳು ರೈತರನ್ನು ಒಗ್ಗೂಡಿಸುವುದಾಗಿ ಇದೇ ವೇಳೆ ಅವರು ಹೇಳಿಕೊಂಡಿದ್ದಾರೆ. ಕೇಂದ್ರದ ತಿದ್ದುಪಡಿ ರೈತ ಮಸೂದೆಯನ್ನು ಎಲ್ಲಾ ವಿರೋಧ ಪಕ್ಷಗಳೂ ಒಗ್ಗಟ್ಟಿನಿಂದ ವಿರೋಧಿಸಬೇಕು ಎಂದು ಕರೆ ನೀಡಿದ ಮಮತಾ ಬ್ಯಾನರ್ಜಿ, ರೈತರ ಪ್ರತಿಭಟನೆಗೆ ರೈತ ಮುಖಂಡ ಟಿಕಾಯತ್ ಅವರಿಗೆ ಬೆಂಬಲ ನೀಡಿದ್ದಾರೆ.
ರೈತರ ಚಳವಳಿಯೂ ಕೇವಲ ಪಂಜಾಬ್ ,ಹರ್ಯಾಣ ಅಥವಾ ಉತ್ತರ ಪ್ರದೇಶಕ್ಕೆ ಸೀಮಿತವಲ್ಲ ಎಂದು ತಿಳಿದುಕೊಳ್ಳಬೇಕು. ಪಶ್ಚಿಮ ಬಂಗಾಳ ಸರ್ಕಾರ ಯಾವತ್ತಿಗೂ ರೈತರ ಪರವಾಗಿ ಇರುತ್ತದೆ. ಈ ಚಳವಳಿ ದೇಶಕ್ಕೆ ಸಂಬಂಧಿಸಿದ್ದಾಗಿದೆ. ಇಂದಿನಿಂದ ನನ್ನ ಗುರಿ, ಕೇಂದ್ರದ ಎನ್ ಡಿಎ ಸರ್ಕಾರವನ್ನು ಅಸ್ಥಿರಗೊಳಿಸುವುದು ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ನೀತಿ ನಿರೂಪಣೆಗಳ ಬಗ್ಗೆ ರಾಜ್ಯಗಳು ಮಾತನಾಡಬೇಕು, ಆಗುತ್ತಿರುವ ಅನ್ಯಾಯ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಧ್ವನಿಯೆತ್ತಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…