ಬೆಂಗಳೂರು: ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಅವರು ಪಕ್ಷದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಕೊಲ್ಲಿ ಎಂದು ಹೇಳಿರುವ ಹೇಳಿಕೆ ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.
ಬೇಳೂರು ಗೋಪಾಲಕೃಷ್ಣ ಅವರು ಒಂದು ತಿಂಗಳ ಹಿಂದೆ ಅಂದರೆ ಫೆ.4 ರಂದು ನೀಡಿದ ಹೇಳಿಕೆಯನ್ನ ಕರ್ನಾಟಕ ಬಿಜೆಪಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಕೇಂದ್ರ ಗೃಹ ಇಲಾಖೆ ಹಾಗೂ ಬೆಂಗಳೂರು ನಗರ ಪೊಲೀಸರ ಟ್ವಿಟ್ಟರ್ ಖಾತೆಗಳನ್ನು ಟ್ಯಾಗ್ ಮಾಡಿ ಕ್ರಮಕೈಗೊಳ್ಳಲು ಮನವಿ ಮಾಡಿಕೊಂಡಿದೆ.
ರಾಹುಲ್ ಗಾಂಧಿಯವರೇ ನೀವು ಕೆಟ್ಟ ರಾಜಕೀಯವನ್ನು ವಿರೋಧಿಸುತ್ತೀರಿ ಎಂದು ಹೇಳುತ್ತೀರಿ. ಆದರೆ ಈಗ ನಿಮ್ಮ ಪಕ್ಷದ ನಾಯಕರೇ ಮೋದಿ ಅವರನ್ನು ಗುಂಡಿಟ್ಟು ಕೊಲ್ಲಲು ಕರೆ ನೀಡುತ್ತಾರೆ. ಹೀಗಾಗಿ ಇವರ ವಿರುದ್ಧ ಏನು ಕ್ರಮವನ್ನು ಕೈಗೊಳ್ಳುತ್ತೀರಿ ಎಂದು ಕರ್ನಾಟಕ ಬಿಜೆಪಿ ಪ್ರಶ್ನೆಯನ್ನು ಕೇಳಿದೆ.
1 ತಿಂಗಳ ಹಿಂದೆ ಬೇಳೂರು ಗೋಪಾಲಕೃಷ್ಣ ನೀಡಿದ್ದ ಹೇಳಿಕೆಯನ್ನು ಇಂದು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ, ‘ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಅವರು ಪಕ್ಷದ ಅಧಿಕೃತ ಕಾರ್ಯಕ್ರಮದಲ್ಲಿ ಮಾತನಾಡುವಾಗ ಈ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಬೇಕೆಂಬ ಹೇಳಿಕೆ ನೀಡಿದ್ದಾರೆ. ಬಹಿರಂಗ ಕಾರ್ಯಕ್ರಮದಲ್ಲಿ ಪ್ರಧಾನಿಯನ್ನೇ ಕೊಲ್ಲುವ ಬಗ್ಗೆ ಮಾತನಾಡಿರುವುದು ಸಾಧಾರಣ ವಿಷಯವಲ್ಲ. ಹೀಗಾಗಿ, ಈ ಬಗ್ಗೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವರು ಮತ್ತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಲಾಗಿದೆ.
ಚುನಾವಣೆಯ ಸಂದರ್ಭದಲ್ಲಿ ಮೋದಿ ಅವರು ನೀಡಿದ್ದ ಆಶ್ವಾಸನೆಯನ್ನು ಈಡೇರಿಸಿಲ್ಲ ಎಂದು ಟೀಕಿಸಿದ ಬೇಳೂರು ಗೋಪಾಲ ಕೃಷ್ಣ ಅವರು, ಗಾಂಧಿ ಪ್ರತಿಮೆಗೆ ಗುಂಡಿಟ್ಟ ಸಂದರ್ಭವನ್ನು ಉಲ್ಲೇಖಿಸಿ ಈ ಹೇಳಿಕೆ ನೀಡಿದ್ದಾರೆ. ಮೋದಿ ಚುನಾವಣೆಗೂ ಮುನ್ನ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದರು. ಆದರೆ ನಿರ್ಮಾಣ ಆಗಿದ್ಯಾ ನಿರ್ಮಾಣ ಆಗಿಲ್ಲ ಎಂದಾದರೆ ಪ್ರಧಾನಿ ಮೋದಿಯನ್ನು ತಾಕತ್ ಇದ್ದರೆ ಗುಂಡಿಟ್ಟು ಸಾಯಿಸಿ ಎಂದಿದ್ದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…