ಪಣಜಿ, : ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ವೇಳೆ ಮಾತ್ರ ಪವಿತ್ರ ಗಂಗಾ ನದಿಯನ್ನು ನೆನಪಿಸಿಕೊಳ್ಳುತ್ತಾರೆ. ಅವರು ವೋಟಿಗಾಗಿ ಏನು ಬೇಕಾದರೂ ಮಾಡಲು ತಯಾರಿದ್ದಾರೆ” ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಪ್ರಧಾನಿ ಮೋದಿಯವರು ಮತಗಳನ್ನು ಪಡೆಯಲು ಏನು ಬೇಕಾದರೂ ಮಾಡಲು ಸಿದ್ದರಿದ್ದಾರೆ. ಉತ್ತರಾಖಂಡದಲ್ಲಿ ಧ್ಯಾನ ಮಾಡಿದ್ದರು. ಈಗ ಗಂಗಾನದಿಯಲ್ಲಿ ಸ್ನಾನ ಮಾಡಿದ್ದಾರೆ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ವರ್ಷಪೂರ್ತಿ ನೀವು ಎಲ್ಲಿದ್ದಿರಿ? ಎಂದು ಪ್ರಶ್ನಿಸಿದ್ದಾರೆ.
ಇನ್ನು “ಗಂಗಾಜಲವನ್ನು ನಾವು ಪವಿತ್ರ ಎಂದು ನಂಬುತ್ತೇವೆ. ಆದರೆ ಬಿಜೆಪಿಯವರು ಕೊರೊನಾದಿಂದ ಮೃತಪಟ್ಟವರ ಮೃತದೇಹಗಳನ್ನು ಗಂಗಾ ನದಿಗೆ ಎಸೆದಿದ್ದಾರೆ” ಎಂದು ಆರೋಪಿಸಿದ್ದಾರೆ.
ನಾವು ಚುನಾವಣೆ ಸಂದರ್ಭದಲ್ಲಿ ಮಾತ್ರ ನಾವು ಗಂಗಾನದಿ ಪೂಜೆ ಮಾಡುವುದಿಲ್ಲ. ಆದರೆ ತಮ್ಮ ಲೋಕಸಭಾ ಕ್ಷೇತ್ರವಾದ ವಾರಾಣಸಿಗೆ ಹೋಗಿರುವ ಮೋದಿ, ಕೇವಲ ಮತ ಪಡೆಯಲು ಮಾತ್ರ ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…