Featured

ಪ್ರಧಾನಿ ಮೋದಿಯಿಂದ ದೀಪಾವಳಿಗೆ ಬಂಪರ್‌ ಉಡುಗೊರೆ

ನವದೆಹಲಿ: ಕೃಷಿ ಹೊರತುಪಡಿಸಿದರೆ ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಎರಡನೇ ಅತಿದೊಡ್ಡ ವಲಯವಾಗಿರುವ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ವಲಯ (ಎಂಎಸ್‌ಎಂಇ)ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೀಪಾವಳಿ ಉಡುಗೊರೆ ನೀಡಿದ್ದಾರೆ. ಹೆಚ್ಚಿನ ಉದ್ಯೋಗ ಸೃಷ್ಟಿಮತ್ತು ಎಂಎಸ್‌ಎಂಇಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೇವಲ 59 ನಿಮಿಷಗಳಲ್ಲೇ ಸಾಲ ಒದಗಿಸುವುದೂ ಸೇರಿದಂತೆ 12 ಹೊಸ ಯೋಜನೆಗಳನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.

ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆ (ಎಂಎಸ್‌ಎಂಇ)ಗಳಿಗೆ ಬೆಂಬಲ ಮತ್ತು ನೆರವು ನೀಡುವ ಯೋಜನೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮೋದಿ, ಜಿಎಸ್‌ಟಿ ನೊಂದಾಯಿತ ಎಂಎಸ್‌ಎಂಇಗಳಿಗೆ www.psbloanin59min.com ಮೂಲಕ ಕೇವಲ 59 ನಿಮಿಷಗಳಲ್ಲೇ 1 ಕೋಟಿ ರು.ವರೆಗೂ ಸಾಲ ನೀಡಲಾಗುವುದು. ಜೊತೆಗೆ 1 ಕೋಟಿ ರು.ವರೆಗಿನ ಸಾಲಕ್ಕೆ ಶೇ.2ರಷ್ಟುಬಡ್ಡಿ ಸಬ್ಸಿಡಿ ನೀಡಲಾಗುವುದು, ಇದಲ್ಲದೇ ಪ್ರೀ ಶಿಪ್‌ಮೆಂಟ್‌ ಮತ್ತು ಪೋಸ್ಟ್‌ ಶಿಪ್‌ಮೆಂಟ್‌ ಸಾಲಕ್ಕೆ ನೀಡಲಾಗುತ್ತಿದ್ದ ಶೇ.3ರಷ್ಟುಬಡ್ಡಿ ರಿಯಾಯಿತಿಯನ್ನು ಶೇ.5ಕ್ಕೆ ಹೆಚ್ಚಿಸಲಾಗುವುದು ಎಂದು ಪ್ರಕಟಿಸಿದರು.

ಇದಲ್ಲದೆ ವಲಯದಲ್ಲಿನ ಇನ್ಸ್‌ಪೆಕ್ಟರ್‌ ರಾಜ್‌ ನೀತಿಗೆ ಬ್ರೇಕ್‌ ಹಾಕಲು ಸರ್ಕಾರ ಮಹತ್ವದ ನಿರ್ಧಾರ, ಕೈಗೊಂಡಿದೆ. ಇನ್ನು ಮುಂದೆ ಯಾವ ಕಾರ್ಖಾನೆಗಳಿಗೆ ಯಾವ ಅಧಿಕಾರಿ ತಪಾಸಣೆಗೆ ಹೋಗಬೇಕು ಎನ್ನುದನ್ನು ಕಂಪ್ಯೂಟರ್‌ ಮೂಲಕವೇ ನಿರ್ಧರಿಸಲಾಗುವುದು. ಹೀಗೆ ತಪಾಸಣೆಗೆ ಹೋದ ಅಧಿಕಾರ ಅಲ್ಲಿಯ ವರದಿಯನ್ನು 48 ಗಂಟೆಗಳ ಒಳಗೆ ಪೋರ್ಟ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಇದೊಂದು ಅತ್ಯಂತ ಮಹತ್ವದ ನಿರ್ಧಾರ ಎಂದು ಮೋದಿ ಪ್ರಕಟಿಸಿದರು. ಜೊತೆಗೆ ಎಂಎಎಸ್‌ಎಂಇ ವಲಯದ ಅಭಿವೃದ್ಧಿಗೆ ಪೂರಕವಾದ ಇತರೆ ಹಲವು ಕ್ರಮಗಳನ್ನು ಪ್ರಧಾನಿ ಪ್ರಕಟಿಸಿದರು.

59 ನಿಮಿಷದಲ್ಲೇ ಸಾಲ:

ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ಸಾಲ ಸೌಲಭ್ಯ ನೀಡಲು www.psbloanin59min.com ಎಂಬ ವೆಬ್‌ ಆರಂಭಿಸಲಾಗಿದೆ. ಈ ಮೂಲಕ ಜಿಎಸ್ಟಿನೊಂದಾಯಿತ ಉದ್ದಿಮೆಗಳು ಕೇವಲ 59 ನಿಮಿಷದಲ್ಲೇ 1 ಕೋಟಿ ರು. ವರೆಗೂ ಸಾಲಸೌಲಭ್ಯ ಪಡೆಯಬಹುದಾಗಿದೆ. ಇಷ್ಟುದಿನ ಉದ್ದಿಮೆ ಸಾಲ ಪಡೆಯಲು 20ರಿಂದ 25 ದಿನಗಳು ಬೇಕಾಗುತ್ತಿದ್ದವು. ಜೊತೆಗೆ ಸಾಲದ ಹಣವನ್ನು ವಿತರಿಸಲು 7ರಿಂದ 8 ದಿನಗಳು ಬೇಕಾಗುತ್ತಿದ್ದವು.

ಜಾಹೀರಾತುಗಳು

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago