ನವದೆಹಲಿ:ಕೇಂದ್ರದ ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನ ಹೊಂದಿದ್ದು, ಬುಧವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಸುಷ್ಮಾ ಸ್ವರಾಜ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಿದ್ದು, ಈ ವೇಳೆ ಪ್ರಧಾನಿ ಭಾವುಕರಾಗಿದ್ದಾರೆ.
ಸುಷ್ಮಾ ಸ್ವರಾಜ್ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ್ದ ಮೋದಿ ಅವರು ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಆತ್ಮೀಯ ವ್ಯಕ್ತಿಯನ್ನ ನೆನೆದು ಭಾವುಕರಾದರು. ಆ ಬಳಿಕ ಸುಷ್ಮಾ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತ್ವಾನ ಹೇಳಿದರು.
ಮಂಗಳವಾರ ರಾತ್ರಿ ತೀವ್ರ ಹೃದಯಾಘಾತಕ್ಕೆ ತುತ್ತಾದ ಅವರನ್ನು ಏಮ್ಸ್ ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಸುಷ್ಮಾ ಸ್ವರಾಜ್ ಸಾವನ್ನಪ್ಪಿದ್ದಾರೆ.
ಸುಷ್ಮಾ ಸ್ವರಾಜ್ ಅಂತಿಮ ದರ್ಶನ ಪಡೆಯಲು ಅನೇಕ ರಾಜಕೀಯ ನಾಯಕರು ನಿವಾಸಕ್ಕೆ ಆಗಮಿಸುತ್ತಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್, ಬಹುಜನ ಪಕ್ಷದ ಮುಖ್ಯಸ್ಥೆ ಮಾಯಾವತಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.
ಭಾರತದಲ್ಲಿರುವ ಇಸ್ರೇಲಿ ರಾಯಭಾರಿ ರಾನ್ ಮಲ್ಕಾ ಕೂಡ ಸುಷ್ಮಾ ಸ್ವರಾಜ್ ನಿವಾಸಕ್ಕೆ ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…