Featured

ಪ್ರಧಾನಿ ಮೋದಿಯಿಂದ ಸುಷ್ಮಾ ಸ್ವರಾಜ್ ಪಾರ್ಥೀವ ಶರೀರದ ಅಂತಿಮ ದರ್ಶನ : ಭಾವುಕರಾದ ಪ್ರಧಾನಿ -Vishwanews24

ನವದೆಹಲಿ:ಕೇಂದ್ರದ ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನ ಹೊಂದಿದ್ದು, ಬುಧವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಸುಷ್ಮಾ ಸ್ವರಾಜ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದಿದ್ದು, ಈ ವೇಳೆ ಪ್ರಧಾನಿ ಭಾವುಕರಾಗಿದ್ದಾರೆ.

ಸುಷ್ಮಾ ಸ್ವರಾಜ್ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ್ದ ಮೋದಿ ಅವರು ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಆತ್ಮೀಯ ವ್ಯಕ್ತಿಯನ್ನ ನೆನೆದು  ಭಾವುಕರಾದರು. ಆ ಬಳಿಕ ಸುಷ್ಮಾ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತ್ವಾನ ಹೇಳಿದರು.

ಮಂಗಳವಾರ ರಾತ್ರಿ ತೀವ್ರ ಹೃದಯಾಘಾತಕ್ಕೆ ತುತ್ತಾದ ಅವರನ್ನು ಏಮ್ಸ್ ಆಸ್ಪತ್ರೆಗೆ ಸೇರಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಸುಷ್ಮಾ ಸ್ವರಾಜ್ ಸಾವನ್ನಪ್ಪಿದ್ದಾರೆ.

ಸುಷ್ಮಾ ಸ್ವರಾಜ್​ ಅಂತಿಮ ದರ್ಶನ ಪಡೆಯಲು ಅನೇಕ ರಾಜಕೀಯ ನಾಯಕರು ನಿವಾಸಕ್ಕೆ ಆಗಮಿಸುತ್ತಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್​, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಬಿಜೆಪಿ ಹಿರಿಯ ಮುಖಂಡ ಎಲ್​.ಕೆ.ಆಡ್ವಾಣಿ, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್​ ಯಾದವ್​, ಬಹುಜನ ಪಕ್ಷದ ಮುಖ್ಯಸ್ಥೆ ಮಾಯಾವತಿ, ಲೋಕಸಭಾ ಸ್ಪೀಕರ್​ ಓಂ ಬಿರ್ಲಾ, ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.

ಭಾರತದಲ್ಲಿರುವ ಇಸ್ರೇಲಿ ರಾಯಭಾರಿ ರಾನ್​ ಮಲ್ಕಾ ಕೂಡ ಸುಷ್ಮಾ ಸ್ವರಾಜ್​ ನಿವಾಸಕ್ಕೆ ಆಗಮಿಸಿ ಅಂತಿಮ ನಮನ ಸಲ್ಲಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

23 hours ago