Featured

ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಟೀಕಿಸಿದ್ದ ಕೈ ನಾಯಕ ಪಕ್ಷಕ್ಕೆ ರಾಜೀನಾಮೆ – Vishwanews24

ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಟೀಕಿಸಿದ್ದ ಕೈ ನಾಯಕ ಪಕ್ಷಕ್ಕೆ ರಾಜೀನಾಮೆ

ನವದೆಹಲಿ: 2002ರ ಗುಜರಾತ್ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ಭಾರತದಲ್ಲಿ ಪ್ರದರ್ಶಿಸುವುದನ್ನು ವಿರೋಧಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ವಿರೋಧಿಸಿ ಕಾಮೆಂಟ್ ಮಾಡಿದ ಒಂದು ದಿನದ ನಂತರ ಅನಿಲ್ ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅನಿಲ್ ಆಂಟೋನಿ ಇಂದು ಟ್ವಿಟರ್‌ನಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಹಂಚಿಕೊಂಡಿದ್ದಾರೆ.

2002 ರ ಗುಜರಾತ್ ಗಲಭೆಗಳ ಸಾಕ್ಷ್ಯಚಿತ್ರದ ವಿವಾದದ ನಡುವೆ, ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ಅನಿಲ್ ಆಂಟೋನಿ ಅವರು ಬಿಬಿಸಿಯನ್ನು ಪೂರ್ವಾಗ್ರಹಗಳ ಸುದೀರ್ಘ ಇತಿಹಾಸ ಹೊಂದಿರುವ ರಾಜ್ಯ ಪ್ರಾಯೋಜಿತ ಚಾನೆಲ್ ಎಂದು ಪರಿಗಣಿಸುವುದಾಗಿ ಮಂಗಳವಾರ ಹೇಳಿದ್ದರು.

ಇದರ ಬೆನ್ನಲ್ಲೇ, ಪಕ್ಷದಿಂದಲೇ ಟೀಕೆಗೆ ಗುರಿಯಾಗಿರುವುದಾಗಿ ಹೇಳಿಕೊಂಡಿದ್ದು, ಅನೇಕ ನಿಂದನೆ ಕರೆಗಳೂ ಬಂದಿವೆ. ನಾನು ಎಲ್ಲೇ ಇದ್ರೂ ನನ್ನ ಜೀವನ ಮುಂದೆ ಸಾಗುತ್ತದೆ. ಹೀಗಾಗಿ ನಾನು ಕಾಂಗ್ರೆಸ್‌ನ ಎಲ್ಲಾ ಜವಾಬ್ದಾರಿಗಳಿಗೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

15 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

16 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

17 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

17 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

17 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

17 hours ago