Featured

ಪ್ರಧಾನಿ  ಮೋದಿ, ಅಮಿತ್ ಶಾ ಹಾಗೂ ರಾಜ್ಯದ ಜನತೆಯ ಆಶೀರ್ವಾದ ಇರೋವರೆಗೆ ನನ್ನನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ : ಸಿಎಂ BSY -Vishwanews24

ಪ್ರಧಾನಿ  ಮೋದಿ, ಅಮಿತ್ ಶಾ ಹಾಗೂ ರಾಜ್ಯದ ಜನತೆಯ ಆಶೀರ್ವಾದ ಇರೋವರೆಗೆ ನನ್ನನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ : ಸಿಎಂ BSY -Vishwanews24

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯದ ಜನತೆಯ ಆಶೀರ್ವಾದ ಇರೋವರೆಗೆ ನನ್ನನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಸಿಎಂ, ಕಳೆದ 6 ತಿಂಗಳಿನಿಂದ ನನ್ನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸುತ್ತಾರೆ ಅಂತ ಬೆಳಗ್ಗೆ ಎದ್ದಾಗಿನಿಂದ ಹೇಳ್ತಿದ್ದೀರಿ. ಆದರೆ ಎಲ್ಲಿವರೆಗೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವರ ಶಾ ಅವರ ಬೆಂಬಲ ಹಾಗೂ ರಾಜ್ಯದ ಜನರ ಆಶೀರ್ವಾದ ಇದೆಯೋ ಅಲ್ಲಿಯವರೆಗೆ ನನ್ನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ದಿಲ್ಲಿಯಲ್ಲಿ ರೈತರ ಹೆಸರಿನಲ್ಲಿ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ : ಪೇಜಾವರ ವಿಶ್ವಪ್ರಸನ್ನ ಶ್ರೀ -Vishwanews24

ಈ ಇಬ್ಬರು ಇರುವವರೆಗೆ ನನ್ನ ಮೇಲೆ 100 ಕೇಸ್ ಹಾಕಿದರು ಕೂಡ ನಾನು ಹೆದರಲ್ಲ. ನಾನು ಪ್ರಾಮಾಣಿಕ ಅನ್ನೋದನ್ನ ಸಾಬೀತು ಮಾಡ್ತೀನಿ. ದಾರಿಯಲ್ಲಿ ಹೋಗುವವರೆಲ್ಲ ಆರ್‍ಟಿಐ ನಲ್ಲಿ ಅರ್ಜಿ ಹಾಕಿ ಕೇಸ್ ಹಾಕ್ತಾರೆ. ನಾವು ಮನಸ್ಸು ಮಾಡಿದರೆ ಎಷ್ಟು ಕೇಸ್ ಬೇಕಾದರು ಹಾಕಬಹುದು. ಆದರೆ ನಾವು ಹಾಗೆ ಮಾಡಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನ 150 ಸ್ಥಾನಗಳಲ್ಲಿ ಗೆಲ್ಲಿಸಿ ನಿಮ್ಮನ್ನ ವಿರೋಧ ಪಕ್ಷದಲ್ಲಿ ಕೂರಿಸುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಕಿಡಿಕಾರಿದರು.

ದೇವರ ದಯೆಯಿಂದ ಮುಂದೆ ಒಳ್ಳೆ ಕಾಲ ಬರುತ್ತೆ. ಎಲ್ಲರು ಸೇರಿ ರಾಜ್ಯದ ಅಭಿವೃದ್ಧಿ ಮಾಡಲು ಶ್ರಮ ವಹಿಸೋಣ. ಬರುವಂತ ದಿನಗಳಲ್ಲಿ ತೆರಿಗೆ ಸುಧಾರಣೆ ಕಾಣಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದರು.

ಉದ್ಯಮ ಮತ್ತು ಕೈಗಾರಿಕಾ ಘಟಕಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಕೊಡಬೇಕು : ವಿಧಾನಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ -Vishwanews24

 

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

21 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago