ಪ್ರಧಾನಿ ಮೋದಿ ಅವರು ಕರೆ ನೀಡಿರುವ ‘ಜನತಾ ಕರ್ಫ್ಯೂ’ವನ್ನು ಬೆಂಬಲಿಸುವ ಮೂಲಕ ಸಾಮಾಜಿಕ ಕರ್ತವ್ಯವನ್ನು ಪಾಲಿಸೋಣ : ಎಚ್.ಡಿ ದೇವೇಗೌಡ -Vishwanews24
ಬೆಂಗಳೂರು: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಭಾನುವಾರ ದೇಶಾದ್ಯಂತ “ಜನತಾ ಕರ್ಫ್ಯೂ”ವನ್ನು ಮೋದಿ ಘೋಷಣೆ ಮಾಡಿದ್ದು ಪ್ರಧಾನಿ ಮೋದಿ ಯ ಕರೆಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಬೆಂಬಲ ವ್ಯಕ್ತಪಡಿಸಿದ್ದು ಜನತಾ ಕರ್ಫ್ಯೂ”ವನ್ನು ಬೆಂಬಲಿಸುವ ಮೂಲಕ ಸಾಮಾಜಿಕ ಕರ್ತವ್ಯವನ್ನು ಪಾಲಿಸೋಣ ಎಂದು ಹೇಳಿದ್ದಾರೆ .
ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಮಾರ್ಚ್ 22 ಭಾನುವಾರ ಜನತಾ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸ್ವಯಂ ಪ್ರೇರಣೆಯಿಂದ ಜನರು ಯಾರು ಮನೆಯಿಂದ ಹೊರಗಡೆ ಬರದೆ ಕೊರೊನಾ ನಿಯಂತ್ರಣಕ್ಕೆ ಸಹಕಾರ ನೀಡುವುದು ಇದರ ಉದ್ದೇಶವಾಗಿದೆ. ಮಾಜಿ ಪ್ರಧಾನಿ ಎಚ್ಡಿ ದೇಗೇಗೌಡರು ಟ್ವೀಟ್ ಮಾಡುವ ಮೂಲಕ ಜನತಾ ಕರ್ಪ್ಯೂಗೆ ಬೆಂಬಲ ಸೂಚಿಸಿದ್ದಾರೆ.
ತಮ್ಮ ಟ್ವಿಟ್ ನಲ್ಲಿ “ಕೊರೋನಾ ಮಹಾಮಾರಿಯನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಸಂಕಲ್ಪ ಹಾಗೂ ಸಂಯಮದಿಂದ ಎದುರಿಸಬೇಕೆಂಬ ಪ್ರಧಾನಿಯವರ ಮಾತು ಪಾಲನಯೋಗ್ಯವಾಗಿದ್ದು, ಮಾರ್ಚ್ 22 ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ‘ಜನತಾ ಕರ್ಫ್ಯೂ’ವನ್ನು ಬೆಂಬಲಿಸುವ ಮೂಲಕ ಸಾಮಾಜಿಕ ಕರ್ತವ್ಯವನ್ನು ಪಾಲಿಸೋಣ” ಎಂದಿದ್ದಾರೆ.
ಕೊರೋನಾ ಮಹಾಮಾರಿಯನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಸಂಕಲ್ಪ ಹಾಗೂ ಸಂಯಮದಿಂದ ಎದುರಿಸಬೇಕೆಂಬ ಪ್ರಧಾನಿಯವರ ಮಾತು ಪಾಲನಯೋಗ್ಯವಾಗಿದ್ದು, ಮಾರ್ಚ್ 22 ಭಾನುವಾರದಂದು @narendramodi ಅವರು ಕರೆ ನೀಡಿರುವ 'ಜನತಾ ಕರ್ಫ್ಯೂ'ವನ್ನು ಬೆಂಬಲಿಸುವ ಮೂಲಕ ಸಾಮಾಜಿಕ ಕರ್ತವ್ಯವನ್ನು ಪಾಲಿಸೋಣ.@AmitShah @nsitharaman@drharshvardhan pic.twitter.com/GU42XiZk5g
— H D Devegowda (@H_D_Devegowda) March 20, 2020
