ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡು, ಅಲ್ಲಿಂದ ಹೊರ ಬಂದಿದ್ದ ನಟ ಶಶಿಕುಮಾರ್ , ಇಂದು ಬೆಂಗಳೂರಿನಲ್ಲಿ ಬಿಜೆಪಿ ಪಕ್ಷ ಸೇರಿಕೊಂಡಿದ್ದಾರೆ. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರಿಕೊಂಡಿರುವ ಶಶಿಕುಮಾರ್, ತಾವು ನರೇಂದ್ರ ಮೋದಿ ( ಅವರ ಕಾರ್ಯವೈಖರಿ ಮೆಚ್ಚಿ ಈ ಪಕ್ಷವನ್ನು ಸೇರಿರುವುದಾಗಿ ಹೇಳಿದ್ದಾರೆ.
ಸಿನಿಮಾ ರಂಗದ ಜೊತೆ ಜೊತೆಗೆ ಕಾಂಗ್ರೆಸ್, ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಶಶಿಕುಮಾರ್, ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋಲು ಮತ್ತು ಗೆಲುವನ್ನೂ ಕಂಡಿದ್ದಾರೆ. ಇದೀಗ ಮತ್ತೆ ಸಕ್ರೀಯವಾಗಿ ರಾಜಕಾರಣದಲ್ಲೇ ಉಳಿಯುವ ಇಂಗಿತವನ್ನೂ ಅವರು ವ್ಯಕ್ತ ಪಡಿಸಿದ್ದಾರೆ. ಇಂದು ಬಿಜೆಪಿ ಪಕ್ಷ ಸೇರ್ಪಡೆಗೊಂಡ ನಂತರ ತಮ್ಮ ರಾಜಕೀಯ ನಿಲುವುಗಳ ಬಗ್ಗೆಯೂ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಕಾಂತಾರ ಸಿನಿಮಾವನ್ನು ವಿರೇಂದ್ರ ಹೆಗ್ಗಡೆ ಅವರು ನೋಡಿದ್ದು ದೇವರೇ ನೋಡಿದ್ದಷ್ಟು ಸಂತಸವಾಯಿತು ..
ಬಿಜೆಪಿ ಸೇರ್ಪಡೆಗೊಂಡ ನಂತರ ಮಾಧ್ಯಮಗಳ ಜೊತೆ ಮಾತನಾಡಿರುವ ಶಶಿಕುಮಾರ್, ‘ನಾನು ಇಲ್ಲಿ ಟಿಕೆಟ್ ಕೇಳಿಲ್ಲ. ಪ್ರಧಾನಿ ನರೇಂದ್ರ ಮೋದಿ ಕಾರ್ಯವೈಖರಿ ಬಗ್ಗೆ ಮೆಚ್ಚಿ ಬಂದಿದ್ದೇನೆ. ಸಿಎಂ ಕೂಡ SC, ST ಸಮುದಾಯಕ್ಕೆ ನೀಡಿದ ಕೊಡುಗೆ ನೋಡಿ ಬಂದೆ. ಮೀಸಲಾತಿ ವಿಚಾರವಾಗಿ ಬಹು ವರ್ಷದ ಬೇಡಿಕೆ ಈಡೇರಿಸಿದ್ದಾರೆ ಮುಖ್ಯಮಂತ್ರಿಗಳು ಎಂದಿದ್ದಾರೆ.
‘ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ನಾನು ಸನ್ಯಾಸಿಯಲ್ಲ, ಪಕ್ಷದ ತೀರ್ಮಾನವೇ ಅಂತಿಮ. ಪಕ್ಷ ಟಿಕೆಟ್ ಕೊಟ್ರೆ ಸ್ಪರ್ಧಿಸುವ ಉತ್ಸಾಹ ಇದೆ’ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ. ತಾವು ಚಳ್ಳಕೆರೆ ಟಿಕೆಟ್ ಆಕಾಂಕ್ಷಿ ಎನ್ನುವುದನ್ನೂ ಪರೋಕ್ಷವಾಗಿ ತಿಳಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…