ನವದೆಹಲಿ: ಮೋದಿ ನೇತೃತ್ವದ ಸಂಘಟನೆ ದೇಶವನ್ನು ಹೇಗೆ ಒಡೆಯುವುದು ಮತ್ತು ದ್ವೇಷವನ್ನು ಹೇಗೆ ಹರಡುವುದು ಎಂಬ ಬಗ್ಗೆ ಕಲಿಸಿದೆ. ಹೀಗೆ ಮಾಡುವಲ್ಲಿ ಅವರು ನಂಬರ್ 1 ಸ್ಥಾನದಲ್ಲಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ ಆರ್ ಸಿ ಜಾರಿ ಮಹಾತ್ಮ ಗಾಂಧಿ ಸಮಾಧಿ ರಾಜ್ ಘಾಟ್ ಬಳಿ ನಡೆದ ಏಕತೆಗಾಗಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ದ್ವೇಷವನ್ನು ಹರಡಲು ಹಾಗೂ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರು ಸಂವಿಧಾನದ ಮೇಲೆ ದಾಳಿ ಮಾಡಲು, ಭಾರತ ಮಾತೆಯ ಧ್ವನಿಯನ್ನು ಅಡಗಿಸಲು ಜನರು ಅವಕಾಶ ಮಾಡಿಕೊಡಲ್ಲ ಎಂದು ಗುಡುಗಿದ್ದಾರೆ.
ದೇಶದ ಪ್ರಗತಿಯನ್ನು ತಡೆಯಲು ನಮ್ಮ ಶತ್ರುಗಳು ಏನನ್ನೂ ಮಾಡಲಿಲ್ಲವೋ ಅದನ್ನು ಈಗ ಮೋದಿ ಮಾಡುತ್ತಿದ್ದಾರೆ. ನೀವು ಉದ್ಯೋಗ ಒದಗಿಸಲಿಲ್ಲ, ದೇಶದ ಆರ್ಥಿಕತೆಯನ್ನು ಹಾಳು ಮಾಡಿದ್ದಾರೆ. ಇದೇ ನಮ್ಮ ಬಲವಾಗಿದೆ. ಆದ್ದರಿಂದ ನೀವು ದ್ವೇಷದ ಹಿಂದೆ ಅಡಗಿದ್ದೀರಿ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ಅವರು, ದೇಶದಲ್ಲಿ ಯುವಕರು ಏಕೆ ಉದ್ಯೋಗ ಪಡೆಯುತ್ತಿಲ್ಲ, ವಿದ್ಯಾರ್ಥಿಗಳ ಧ್ವನಿಯನ್ನು ಏಕೆ ಅಡಗಿಸಲಾಗುತ್ತಿದೆ ಎಂಬುದರ ಬಗ್ಗೆ ದೇಶಕ್ಕೆ ಮೋದಿ ತಿಳಿಸಬೇಕಾಗಿದೆ ಎಂದು ಆಗ್ರಹಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…