ಕನ್ಯಾಕುಮಾರಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮಿಳು ಸಂಸ್ಕೃತಿಯನ್ನು ಗೌರವಿಸುವುದಿಲ್ಲ. ತಮಿಳುನಾಡಿನ ಪ್ರತ್ಯೇಕ ಸಾಂಸ್ಕೃತಿಕ ಗುರುತನ್ನು ನಾಶ ಮಾಡುವ ಹುನ್ನಾರ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ .
ಕನ್ಯಾಕುಮಾರಿಯಲ್ಲಿ ಕಾಂಗ್ರೆಸ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಸಂಸ್ಕೃತಿಯ ರಕ್ಷಣೆಯ ಜವಾಬ್ದಾರಿ ಹೊರಬೇಕಿದ್ದ ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ, ಪ್ರಧಾನಿ ಮೋದಿ ಬಯಸಿದ್ದನ್ನೇ ಮಾಡುತ್ತಾ ತಮಿಳು ಸಹೋದರರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಕಾಂಗ್ರೆಸ್ ಪಕ್ಷವು ಇಡೀ ದೇಶದಲ್ಲಿ ಕುಸಿಯುತ್ತಿದೆ : ಅಮಿತ್ ಶಾ -Vishwanews24
ಪಳನಿಸ್ವಾಮಿ ಆರ್ಎಸ್ಎಸ್ಗೆ ತಮಿಳು ಸಂಸ್ಕೃತಿಯನ್ಜು ಅವಮಾನಿಸಲು ಯಾವುದೇ ಕಾರಣಕ್ಕೂ ಬಿಡಬಾರದು. ಆರ್ಎಸ್ಎಸ್ ಮೊದಲಿನಿಂದಲೂ ದ್ರಾವಿಡ ಸಂಸ್ಕೃತಿಯನ್ನು ತಿರಸ್ಕರಿಸುತ್ತಲೇ ಬಂದಿದ್ದು, ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿಕೂಟದಿಂದ ತಮಿಳು ಸಂಸ್ಕೃತಿಗೆ ಮತ್ತಷ್ಟು ಹಾನಿಯಾಗಲಿರುವುದುಯ ಖಚಿತ ಎಂದು ರಾಹುಲ್ ಎಚ್ಚರಿಸಿದರು.
ಪ್ರಧಾನಿ ಮೋದಿ ಒಂದು ದೇಶ, ಒಂದು ಸಂಸ್ಕೃತಿ ಹಾಗೂ ಒಂದು ಇತಿಹಾಸದ ಕುರಿತು ಮಾತನಾಡುತ್ತಾರೆ. ಹಾಗಾದರೆ ತಮಿಳುನಾಡಿನ ಸಂಸ್ಕೃತಿ ಹಾಗೂ ಇತಿಹಾಸ ಭಾರತದ ಅವಿಭಾಜ್ಯ ಅಂಗವಲ್ಲವೇ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದರು.
ತಮಿಳುನಾಡು ತನ್ನದೇ ಆದ ವಿಶಿಷ್ಟ ಸಾಂಸ್ಕೃತಿಕ ಇತಿಹಾಸವನ್ನು ಹೊಂದಿದ್ದು, ಓರ್ವ ಭಾರತೀಯನಾಗಿ ಈ ಭವ್ಯ ಇತಿಹಾಸವನ್ನು ಕಾಪಾಡುವುದು ತಮ್ಮ ಜವಾಬ್ದಾರಿ ಎಂದು ರಾಹುಲ್ ಗಾಂಧಿ ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…