ತಿರುವನಂತಪುರ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಏಕಾಂಗಿಯಾಗಿ ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ಅರ್ಥ ಮಾಡಿಕೊಂಡಿದೆ ಎಂದು ತಿರುವನಂತಪುರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸುವಾಗ ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ರಕ್ಷಣಾ ಸಚಿವ ಎ ಕೆ ಆಂಟನಿ ಹೇಳಿದ್ದಾರೆ.
ಕೇರಳದ ತಿರುವನಂತಪುರಂನಲ್ಲಿ ನಡೆದ ಸಮಾವೇಶದಲ್ಲಿ ಅವರು ಮಾತನಾಡಿದ್ದು, ಈ ಹೇಳಿಕೆಯು ಕಾಂಗ್ರೆಸ್ ವಲಯದಲ್ಲಿ ಅಸಮಧಾನ ಸೃಷ್ಟಿಸಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ನಿಂದ ಮಾತ್ರ ನರೇಂದ್ರ ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವಿಲ್ಲ. ಆದರೂ ಕೂಡ ಮೋದಿಯವರನ್ನು ಅಧಿಕಾರದಿಂದ ದೂರವಿಡಲು ಪ್ರಚಾರದಲ್ಲಿ ಕಾಂಗ್ರೆಸ್ ಪ್ರಮುಖ ಶಕ್ತಿಯಾಗಿದೆ. ಹೀಗಾಗಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಬೇರೆ ಪಕ್ಷಗಳೊಂದಿಗೆ ಕೈಜೋಡಿಸಲು ಮುಂದಾಗಿದೆ ಎಂದು ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಹೇಳಿದ್ದರು.
ಚುನಾವಣೆ ಸಮೀಪಿಸುತ್ತಿರುವಾಗ ಕೊನೆ ಹಂತದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅಭ್ಯಾಸವನ್ನು ಕಾಂಗ್ರೆಸ್ ಬಿಡಬೇಕು. ಅಭ್ಯರ್ಥಿಗಳ ಆಯ್ಕೆ ಜಿಲ್ಲಾ ಸಮಿತಿಯಿಂದ ನಿರ್ಧಾರವಾಗಬೇಕು. ಕೆಲ ನಾಯಕರು ತೀರ್ಮಾನಿಸುವ ಬದಲು ಅಭ್ಯರ್ಥಿಗಳ ಆಯ್ಕೆಯು ಪ್ರಜಾಸತ್ತಾತ್ಮಕವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…