Featured

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಏಕಾಂಗಿಯಾಗಿ ಎದುರಿಸಲು ಕಾಂಗ್ರೆಸ್ ಗೆ ಸಾಧ್ಯವಿಲ್ಲ: ಕಾಂಗ್ರೆಸ್ ನ ಹಿರಿಯ ನಾಯಕ ಎ.ಕೆ ಆ್ಯಂಟನಿ

ತಿರುವನಂತಪುರ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಏಕಾಂಗಿಯಾಗಿ ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ಅರ್ಥ ಮಾಡಿಕೊಂಡಿದೆ ಎಂದು ತಿರುವನಂತಪುರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸುವಾಗ ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ರಕ್ಷಣಾ ಸಚಿವ ಎ ಕೆ ಆಂಟನಿ ಹೇಳಿದ್ದಾರೆ.

ಕೇರಳದ ತಿರುವನಂತಪುರಂನಲ್ಲಿ ನಡೆದ ಸಮಾವೇಶದಲ್ಲಿ ಅವರು ಮಾತನಾಡಿದ್ದು, ಈ ಹೇಳಿಕೆಯು ಕಾಂಗ್ರೆಸ್ ವಲಯದಲ್ಲಿ ಅಸಮಧಾನ ಸೃಷ್ಟಿಸಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ನಿಂದ ಮಾತ್ರ ನರೇಂದ್ರ ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವಿಲ್ಲ. ಆದರೂ ಕೂಡ ಮೋದಿಯವರನ್ನು ಅಧಿಕಾರದಿಂದ ದೂರವಿಡಲು ಪ್ರಚಾರದಲ್ಲಿ ಕಾಂಗ್ರೆಸ್ ಪ್ರಮುಖ ಶಕ್ತಿಯಾಗಿದೆ. ಹೀಗಾಗಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಬೇರೆ ಪಕ್ಷಗಳೊಂದಿಗೆ ಕೈಜೋಡಿಸಲು ಮುಂದಾಗಿದೆ ಎಂದು  ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಹೇಳಿದ್ದರು.

ಚುನಾವಣೆ ಸಮೀಪಿಸುತ್ತಿರುವಾಗ ಕೊನೆ ಹಂತದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅಭ್ಯಾಸವನ್ನು ಕಾಂಗ್ರೆಸ್ ಬಿಡಬೇಕು. ಅಭ್ಯರ್ಥಿಗಳ ಆಯ್ಕೆ ಜಿಲ್ಲಾ ಸಮಿತಿಯಿಂದ ನಿರ್ಧಾರವಾಗಬೇಕು. ಕೆಲ ನಾಯಕರು ತೀರ್ಮಾನಿಸುವ ಬದಲು ಅಭ್ಯರ್ಥಿಗಳ ಆಯ್ಕೆಯು ಪ್ರಜಾಸತ್ತಾತ್ಮಕವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

48 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

60 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago