ಉಡುಪಿ : ಅಯೋಧ್ಯೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಶ್ರೀ ಪೇಜಾವರ ಮಠಾಧೀಶ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನವದೆಹಲಿಯಲ್ಲಿ ಸೋಮವಾರ ಸಂಜೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.ತಮ್ಮ ಗುರುಗಳಾದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರ್ಕಾರ ಮರಣೋತ್ತರವಾಗಿ ಘೋಷಿಸಿದ್ದ ಪದ್ಮವಿಭೂಷಣ ಪ್ರಶಸ್ತಿ ಯನ್ನು ಸ್ವೀಕರಿಸಲು ನವದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀಗಳೊಂದಿಗೆ ಕುಶಲೋಪರಿ ನಡೆಸಿದ ಮೋದಿಯವರು ಶ್ರೀ ವಿಶ್ವೇಶತೀರ್ಥರನ್ನು ವಿಶೇಷವಾಗಿ ಸ್ಮರಿಸಿದರು.
ರಾಮಮಂದಿರ ನಿರ್ಮಾಣ ಕಾರ್ಯಗಳ ಪ್ರಗತಿಯ ಕುರಿತೂ ಇಬ್ಬರೂ ಸಮಾಲೋಚನೆ ನಡೆಸಿದ್ದಾರೆ
ಇದೇ ವೇಳೆ ನರೇಂದ್ರ ನೋದಿಯವರಿಗೆ ಯಕ್ಷಗಾನದ ಕೇದಗೆ ಮುಂಡಾಸಿನ ಕಿರೀಟ ತೊಡಿಸಿ ಜರತಾರಿ ಶಾಲು, ಬೆಳ್ಳಿಯ ತಟ್ಟೆಯಲ್ಲಿ ಉಡುಪಿ ಶ್ರೀ ಕೃಷ್ಣನ ಗಂಧ , ನಿರ್ಮಾಲ್ಯ ತುಳಸಿ ನೀಡಿ ಆಶೀರ್ವದಿಸಿದರು . ಉಡುಪಿಯ ಚಿತ್ರಕಲಾವಿದೆ ವಸಂತಲಕ್ಷ್ಮೀ ಹೆಬ್ಬಾರ್ ಅವರು ರಚಿಸಿದ ಮೋದಿಯವರು ಉಡುಪಿ ಕೃಷ್ಣನಿಗೆ ಕೈಮುಗಿಯುವ ಭಂಗಿಯ ಸುಂದವಾದ ತೈಲಚಿತ್ರ ಹಾಗೂ ಸಂಸ್ಕೃತ , ಕನ್ನಡ , ತುಳು ಲಿಪಿಗಳಲ್ಲಿ ನರೇಂದ್ರ ಮೋದಿಯವರ ಹೆಸರನ್ನು ಕೆತ್ತಿದ ಸ್ಮರಣಿಕೆಯನ್ನೂ ಶ್ರೀಗಳು ಪ್ರಧಾನಮಂತ್ರಿಯವರಿಗೆ ನೀಡಿದರು.
ಶೀಘ್ರ ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳ ಆಹ್ವಾನ
ಇದೇ ವೇಳೆ ಪ್ರಧಾನಿ ಮೋದಿಯವರಿಗೆ ಉಡುಪಿ ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳು ಆಹ್ವಾನ ನೀಡಿದ್ದು, ಇದೇ ವೇಳೆ ಶೀಘ್ರ ಉಡುಪಿಗೆ ಬರುವ ಆಶ್ವಾಸನೆಯಿತ್ತರು.
ಇನ್ನುಈ ಸಂದರ್ಭದಲ್ಲಿ , ದೇಶದಲ್ಲಿ ಗೋಹತ್ಯಾ ನಿಷೇಧ ಕಾನೂನು ಜಾರಿಗೊಳಿಸುವುದು , ದೇಶಾದ್ಯಂತ ಹಿಂದೂ ಶ್ರದ್ಧಾಕೇಂದ್ರಗಳನ್ನು ಸರ್ಕಾರಿ ವ್ಯವಸ್ಥೆಯಿಂದ ಸ್ವಾಯತ್ತಗೊಳಿಸುವುದು , ಮಹರ್ಷಿ ವೇದವ್ಯಾಸರ ಜಯಂತಿಯನ್ನು (ಆಷಾಢ ಪೂರ್ಣಿಮಾ ಅಥವಾ ಒಂದು ನಿರ್ದಿಷ್ಟ ದಿನಾಂಕವನ್ನು ) ” ತತ್ತ್ವಜ್ಞಾನ ದಿನ ” ಅಥವಾ ” ಅಧ್ಯಾತ್ಮ ದಿನ ” ಎಂದು ಘೋಷಿಸಿ ಸರ್ಕಾರಿ ಆಚರಣೆಗೆ ವ್ಯವಸ್ಥೆಗೊಳಿಸುವುದು , ಹಾಗೂ ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದು ಎಂಬ ನಾಲ್ಕು ಅಪೇಕ್ಷೆಗಳನ್ನು ಲಿಖಿತವಾಗಿ ನೀಡಿದ್ದು ಈ ಬಗ್ಗೆಯೂ ಗಮನಹರಿಸುವುದಾಗಿ ಪ್ರಧಾನಿ ಭರವಸೆ ನೀಡಿದರು,
ಶ್ರೀ ಪೇಜಾವರ ಮಠದ ದಿವಾನರಾದ ಎಂ ರಘುರಾಮಾಚಾರ್ಯ , ಡಿ ಪಿ ಅನಂತ್ , ಸಾಮಾಜಿಕ ಕಾರ್ಯಕರ್ತ ಶ್ರೀಗಳ ಆಪ್ತ ವಾಸುದೇವ ಭಟ್ ಪೆರಂಪಳ್ಳಿ ಉಪಸ್ಥಿತರಿದ್ದರು.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…