Featured

ಪ್ರಧಾನಿ ಮೋದಿ – ಪೇಜಾವರ ಶ್ರೀ ಭೇಟಿ ; ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳ ಆಹ್ವಾನ – Vishwanews24

ಉಡುಪಿ: ಪ್ರಧಾನಿ ಮೋದಿ – ಪೇಜಾವರ ಶ್ರೀ ಭೇಟಿ ; ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳ ಆಹ್ವಾನ – Vishwanews24

ಉಡುಪಿ : ಅಯೋಧ್ಯೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಶ್ರೀ ಪೇಜಾವರ ಮಠಾಧೀಶ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ನವದೆಹಲಿಯಲ್ಲಿ ಸೋಮವಾರ ಸಂಜೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.‌ತಮ್ಮ ಗುರುಗಳಾದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರ್ಕಾರ ಮರಣೋತ್ತರವಾಗಿ ಘೋಷಿಸಿದ್ದ ಪದ್ಮವಿಭೂಷಣ ಪ್ರಶಸ್ತಿ ಯನ್ನು ಸ್ವೀಕರಿಸಲು ನವದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀಗಳೊಂದಿಗೆ ಕುಶಲೋಪರಿ ನಡೆಸಿದ ಮೋದಿಯವರು ಶ್ರೀ ವಿಶ್ವೇಶತೀರ್ಥರನ್ನು ವಿಶೇಷವಾಗಿ ಸ್ಮರಿಸಿದರು.

ರಾಮಮಂದಿರ ನಿರ್ಮಾಣ ಕಾರ್ಯಗಳ ಪ್ರಗತಿಯ ಕುರಿತೂ ಇಬ್ಬರೂ ಸಮಾಲೋಚನೆ ನಡೆಸಿದ್ದಾರೆ

ಇದೇ ವೇಳೆ ನರೇಂದ್ರ ನೋದಿಯವರಿಗೆ ಯಕ್ಷಗಾನದ ಕೇದಗೆ ಮುಂಡಾಸಿನ ಕಿರೀಟ ತೊಡಿಸಿ ಜರತಾರಿ ಶಾಲು, ಬೆಳ್ಳಿಯ ತಟ್ಟೆಯಲ್ಲಿ ಉಡುಪಿ ಶ್ರೀ ಕೃಷ್ಣನ ಗಂಧ , ನಿರ್ಮಾಲ್ಯ ತುಳಸಿ ನೀಡಿ ಆಶೀರ್ವದಿಸಿದರು . ಉಡುಪಿಯ ಚಿತ್ರಕಲಾವಿದೆ ವಸಂತಲಕ್ಷ್ಮೀ ಹೆಬ್ಬಾರ್ ಅವರು ರಚಿಸಿದ ಮೋದಿಯವರು ಉಡುಪಿ ಕೃಷ್ಣನಿಗೆ ಕೈಮುಗಿಯುವ ಭಂಗಿಯ ಸುಂದವಾದ ತೈಲಚಿತ್ರ ಹಾಗೂ ಸಂಸ್ಕೃತ , ಕನ್ನಡ , ತುಳು ಲಿಪಿಗಳಲ್ಲಿ ನರೇಂದ್ರ ಮೋದಿಯವರ ಹೆಸರನ್ನು ಕೆತ್ತಿದ ಸ್ಮರಣಿಕೆಯನ್ನೂ ಶ್ರೀಗಳು ಪ್ರಧಾನಮಂತ್ರಿಯವರಿಗೆ ನೀಡಿದರು.

ಶೀಘ್ರ ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳ ಆಹ್ವಾನ

ಇದೇ ವೇಳೆ ಪ್ರಧಾನಿ ಮೋದಿಯವರಿಗೆ ಉಡುಪಿ ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳು ಆಹ್ವಾನ ನೀಡಿದ್ದು, ಇದೇ ವೇಳೆ ಶೀಘ್ರ ಉಡುಪಿಗೆ ಬರುವ ಆಶ್ವಾಸನೆಯಿತ್ತರು.

ಇನ್ನುಈ ಸಂದರ್ಭದಲ್ಲಿ , ದೇಶದಲ್ಲಿ ಗೋಹತ್ಯಾ ನಿಷೇಧ ಕಾನೂನು ಜಾರಿಗೊಳಿಸುವುದು , ದೇಶಾದ್ಯಂತ ಹಿಂದೂ ಶ್ರದ್ಧಾಕೇಂದ್ರಗಳನ್ನು ಸರ್ಕಾರಿ ವ್ಯವಸ್ಥೆಯಿಂದ ಸ್ವಾಯತ್ತಗೊಳಿಸುವುದು , ಮಹರ್ಷಿ ವೇದವ್ಯಾಸರ ಜಯಂತಿಯನ್ನು (ಆಷಾಢ ಪೂರ್ಣಿಮಾ ಅಥವಾ ಒಂದು ನಿರ್ದಿಷ್ಟ ದಿನಾಂಕವನ್ನು ) ” ತತ್ತ್ವಜ್ಞಾನ ದಿನ ” ಅಥವಾ ” ಅಧ್ಯಾತ್ಮ ದಿನ ” ಎಂದು ಘೋಷಿಸಿ ಸರ್ಕಾರಿ ಆಚರಣೆಗೆ ವ್ಯವಸ್ಥೆಗೊಳಿಸುವುದು , ಹಾಗೂ ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದು ಎಂಬ ನಾಲ್ಕು ಅಪೇಕ್ಷೆಗಳನ್ನು ಲಿಖಿತವಾಗಿ ನೀಡಿದ್ದು ಈ ಬಗ್ಗೆಯೂ ಗಮನಹರಿಸುವುದಾಗಿ ಪ್ರಧಾನಿ ಭರವಸೆ ನೀಡಿದರು,

ಶ್ರೀ ಪೇಜಾವರ ಮಠದ ದಿವಾನರಾದ ಎಂ ರಘುರಾಮಾಚಾರ್ಯ , ಡಿ ಪಿ ಅನಂತ್ , ಸಾಮಾಜಿಕ ಕಾರ್ಯಕರ್ತ ಶ್ರೀಗಳ ಆಪ್ತ ವಾಸುದೇವ ಭಟ್ ಪೆರಂಪಳ್ಳಿ ಉಪಸ್ಥಿತರಿದ್ದರು.

Vishwa News 24

Recent Posts

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

2 minutes ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

12 minutes ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

2 hours ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

2 hours ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

2 hours ago