Featured

ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಮುಖ್ಯಮಂತ್ರಿ ಕುಮಾರಸ್ವಾಮಿ, ಮಮತಾ ಬ್ಯಾನರ್ಜಿ ಹಾಗೂ ಡಾ.ಜಿ. ಪರಮೇಶ್ವರ್ -Vishwanews24

ಬೆಂಗಳೂರು, – ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ನವದೆಹಲಿಯಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳಲ್ಲಿದ್ದಾರೆ.

ರಾಷ್ಟ್ರದ ಪ್ರಧಾನಿಯಾಗಿ ಮತ್ತೆ ನರೇಂದ್ರ ಮೋದಿ ಅವರು ನಾಳೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನರೇಂದ್ರ ಮೋದಿ ಪದಗ್ರಹಣ ಸಮಾರಂಭಕ್ಕೆ ಈಗಾಗಲೇ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನ ಬಂದಿರುವ ಬೆನ್ನಲ್ಲೇ ಡಿಸಿಎಂ ಪರಮೇಶ್ವರ್ ಗೂ ದೆಹಲಿಯ ಪ್ರಧಾನಿ ಕಾರ್ಯಾಲಯದಿಂದ ಆಹ್ವಾನ ಬಂದಿದೆ.

ನಾಳೆ ದಹೆಲಿಯಲ್ಲಿ ನಡೆಯಲಿರುವ ನರೇಂದ್ರ ಮೋದಿ ಪದಗ್ರಹಣ ಸಮಾರಂಭದಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ಅವರೂ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಪ್ರಧಾನಿ ಮೋದಿ ಅವರು ರಾಜಕೀಯ ವೈರತ್ವವನ್ನು ಮರೆತು, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದು, ಅದನ್ನು ದೀದಿ ಒಪ್ಪಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೇ 30 ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹೋಗುವುದಾಗಿ ಹೇಳಿದ್ದಾರೆ.

ಎಲ್ಲಾ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ಕೇಂದ್ರದಲ್ಲಿ ಮತ್ತೆ ಅಭೂತಪೂರ್ವ ಗೆಲುವು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ನಾಳೆ ಎರಡನೇ ಅವಧಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ದೇಶ-ವಿದೇಶಗಳ ಅನೇಕ ಗಣ್ಯರು ಆಗಮಿಸಲಿದ್ದಾರೆ. ರಷ್ಯಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಸೇರಿದಂತೆ ಅನೇಕ ರಾಷ್ಟ್ರಗಳ ರಾಷ್ಟ್ರಾಧ್ಯಕ್ಷರು, ರಾಯಭಾರಿಗಳು ಭಾಗವಹಿಸಲಿದ್ದಾರೆ.

 

 

 

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

5 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

5 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

5 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

5 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

6 hours ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

6 hours ago