ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಬಳಿಕ ಭಾರತ ಕಂಡ ವರ್ಚಸ್ವಿ ನಾಯಕ ಎಂದು ನಟ, ರಾಜಕಾರಣಿ ರಜನಿಕಾಂತ್, 2019ರ ಲೋಕಸಭಾ ಜಯವು ಪ್ರಧಾನಿ ನರೇಂದ್ರ ಮೋದಿಯವರ ಜಯ ಎಂದು ಹೇಳಿದ್ದಾರೆ.
ಚೆನ್ನೈನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯ ಗೆಲುವು ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ. ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ನನಗೂ ಆಮಂತ್ರಣ ಬಂದಿದೆ. ನಾನು ಕೂಡ ಹಾಜರಾಗುತ್ತೇನೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಮುಂದಾಗಿದ್ದಾರೆ. ಇದು ಸೂಕ್ತ ಕ್ರಮವಲ್ಲ. ಪ್ರಜಾಪ್ರಭುತ್ವದಲ್ಲಿ ಬಲಿಷ್ಠ ಸರ್ಕಾರವಷ್ಟೇ ಅಲ್ಲ, ಪ್ರಬಲ ವಿಪಕ್ಷದ ಅಗತ್ಯವೂ ಇದೆ ಎಂದು ತಿಳಿಸಿದರು.
ರಾಹುಲ್ ಗಾಂಧಿ ಅವರು ತಾವು ಸಮರ್ಥ ನಾಯಕರು ಎಂಬುದನ್ನು ಸಾಬೀತು ಮಾಡಬೇಕು. ಈ ನಿಟ್ಟಿನಲ್ಲಿ ನಡೆಯಬೇಕೇ ಹೊರತು ರಾಜೀನಾಮೆ ನೀಡಬಾರದು ಎಂದು ಕಿವಿಮಾತು ಹೇಳಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…