ಪ್ರಧಾನಿ ಮೋದಿ ಲೂಟಿಕೋರರ ರಕ್ಷಕ..! ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಆರೋಪ

Featured, ರಾಜ್ಯ ನ್ಯೂಸ್

ಬೀದರ್: ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರು. ಮೋಸ ಮಾಡಿದ ಲೂಟಿಕೋರರು ದೇಶ ಬಿಟ್ಟು ಪಲಾಯನ ಮಾಡಲು ಪ್ರಧಾನಿ ನರೇಂದ್ರ ಮೋದಿ ದಾರಿ ಮಾಡಿಕೊಟ್ಟಿದ್ದಾರೆ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಆರೋಪಿಸಿದರು.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು 13ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪೂರ್ವಸಿದ್ಧತೆ ಪರಿಶೀಲನೆಗೆ ಇಲ್ಲಿಗೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೋದಿ ಸರಕಾರ ಲೂಟಿಕೋರರ ರಕ್ಷಣೆಗೆ ನಿಂತಿದೆ. ಹಿಂದಿನ ಸಿದ್ದರಾಮಯ್ಯ ಸರಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಿತ್ತು. ಆದರೆ, ಮೋದಿ ಅವರು ಚುನಾವಣೆಗೆ ಮುನ್ನ ನೀಡಿದ್ದ ಯಾವ ಭರವಸೆ ಈಡೇರಿಸಿದ್ದಾರೆ ಎಂದು ಪ್ರಶ್ನಿಸಿದರು.

ಮೋದಿ ಅವರು ಬೇಟಿ ಬೇಟಿ ಬಚಾವೋ ಎಂದು ಹೇಳಿದ್ದರು. ಆದರೆ, ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಹೆಚ್ಚಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದಿದ್ದರು. ಆದರೆ, ಯಾರದೂ ವಿಕಾಸ ಆಗಿಲ್ಲ ಎಂದು ಟೀಕಿಸಿದರು.