Featured

ಪ್ರಧಾನಿ ಮೋದಿ ಸರ್ಕಾರದ ಒತ್ತಡದಿಂದ ತಮ್ಮ ಟ್ವಿಟರ್​ ಫಾಲೋವರ್​ಗಳ ಸಂಖ್ಯೆ ಸೀಮಿತಗೊಳಿಸುತ್ತಿದೆ : ರಾಹುಲ್ ಗಾಂಧಿ ಆರೋಪ – Vishwanews24

ಪ್ರಧಾನಿ ಮೋದಿ ಸರ್ಕಾರದ ಒತ್ತಡದಿಂದ ತಮ್ಮ ಟ್ವಿಟರ್​ ಫಾಲೋವರ್​ಗಳ ಸಂಖ್ಯೆ ಸೀಮಿತಗೊಳಿಸುತ್ತಿದೆ: ರಾಹುಲ್ ಗಾಂಧಿ – Vishwanews24

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಒತ್ತಡದಿಂದ ತಮ್ಮ ಟ್ವಿಟರ್ ಫಾಲೋವರ್​​ಗಳ ಸಂಖ್ಯೆಯನ್ನು ಟ್ವಿಟರ್‌ ಸಂಸ್ಥೆ ಸೀಮಿತಗೊಳಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್​ನ ಸಿಇಒ ಪರಾಗ್ ಅಗರ್ವಾಲ್​ಗೆ ಅವರು ಪತ್ರ ಬರೆದಿದ್ದಾರೆ.

ಡಿಸೆಂಬರ್ 27ರಂದು ರಾಹುಲ್ ಗಾಂಧಿ ಬರೆದ ಪತ್ರವನ್ನು ಉಲ್ಲೇಖಿಸಿ ಹಲವು ಮಾಧ್ಯಮಗಳು ಈ ಕುರಿತು ವರದಿ ಮಾಡಿವೆ. ಅದರಲ್ಲಿ ರಾಹುಲ್ ಗಾಂಧಿ ತಮ್ಮ ಆರೋಪಕ್ಕೆ ಪೂರಕ ಅಂಕಿಅಂಶಗಳನ್ನೂ ಒದಗಿಸಿದ್ದಾರೆ. ಮೊದಲಿಗೆ ರಾಹುಲ್ ಗಾಂಧಿಯವರಿಗೆ ಪ್ರತಿ ತಿಂಗಳು ಸುಮಾರು 2 ಲಕ್ಷ ಹೊಸಬರು ಟ್ವಿಟರ್​ನಲ್ಲಿ ಫಾಲೋ ಮಾಡುತ್ತಿದ್ದರು. ಆದರೆ 2021ರ ಆಗಸ್ಟ್ ನಂತರ ಈ ಸಂಖ್ಯೆ ಕೇವಲ 2,500ರ ಆಸುಪಾಸಿನಲ್ಲಿದೆ. ಅರ್ಥಾತ್ ಸುಮಾರು 2,500 ಜನರು ಮಾತ್ರ ಪ್ರತಿ ತಿಂಗಳು ರಾಹುಲ್ ಗಾಂಧಿ ಖಾತೆಯನ್ನು ಹೊಸದಾಗಿ ಫಾಲೋ ಮಾಡುತ್ತಿದ್ದಾರೆ. ಅಲ್ಲದೇ ಕೆಲ ಸಮಯದಿಂದ ಟ್ವಿಟರ್ ಫಾಲೋವರ್​​ಗಳ ಸಂಖ್ಯೆ 19.5 ಮಿಲಿಯನ್​ನಲ್ಲೇ ಸ್ಥಿರವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಇದನ್ನೂ ಓದಿ :

ಪರೇಶ್ ಅಗರವಾಲ್​ಗೆ ಬರೆದ ಪತ್ರದಲ್ಲಿ ರಾಹುಲ್ ಗಾಂಧಿ, ‘‘ಭಾರತದಲ್ಲಿ ನಿರಂಕುಶಾಧಿಕಾರದ ಬೆಳವಣಿಗೆಗೆ ಟ್ವಿಟರ್ ಸಕ್ರಿಯವಾಗಿ ಸಹಾಯ ಮಾಡದಂತೆ ನೋಡಿಕೊಳ್ಳುವ ಅಗಾಧ ಜವಾಬ್ದಾರಿ ನಿಮ್ಮ ಮೇಲಿದೆ’’ ಎಂದು ಬರೆದಿದ್ದಾರೆ. ‘‘ಜಗತ್ತಿನಾದ್ಯಂತ ಉದಾರವಾದಿ ಪ್ರಜಾಪ್ರಭುತ್ವ ಮತ್ತು ನಿರಂಕುಶಾಧಿಕಾರದ ನಡುವಿನ ಸೈದ್ಧಾಂತಿಕ ಯುದ್ಧವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ರೂಪಿಸಲಾಗುತ್ತಿದೆ. ಇದು ಟ್ವಿಟರ್‌ನಂತಹ ದೊಡ್ಡ ಕಂಪನಿಗಳ ಮೇಲೆ ಬಹುದೊಡ್ಡ ಜವಾಬ್ದಾರಿ ಹೊರಿಸಿದೆ’’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ.

ಆಗಸ್ಟ್​​ನಲ್ಲಿ ರಾಹುಲ್ ಗಾಂಧಿ ಟ್ವಿಟರ್ ಖಾತೆಯನ್ನು ಅಮಾನತುಗೊಳಿಸಿದ್ದ ಟ್ವಿಟರ್ ಸಂಸ್ಥೆ: ಆಗಸ್ಟ್‌ನಲ್ಲಿ ದೆಹಲಿಯ ಅತ್ಯಾಚಾರ ಸಂತ್ರಸ್ತೆಯೋರ್ವರ ಕುಟುಂಬದ ಫೋಟೋವನ್ನು ಟ್ವೀಟ್ ಮಾಡಿದ ನಂತರ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ಸಂಕ್ಷಿಪ್ತವಾಗಿ ಅಮಾನತುಗೊಳಿಸಲಾಗಿತ್ತು. ರಾಹುಲ್ ಗಾಂಧಿಯವರ ಟ್ವಿಟ್ಟರ್ ಪೋಸ್ಟ್‌ಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು, ನಂತರ ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟರ್​ನ ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಎಂಟು ದಿನಗಳ ಕಾಲ ಅವರ ಖಾತೆಯನ್ನು ಅಮಾನತುಗೊಳಿಸಲಾಗಿತ್ತು.

ಇದನ್ನೂ ಓದಿ :

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

16 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago