ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಒತ್ತಡದಿಂದ ತಮ್ಮ ಟ್ವಿಟರ್ ಫಾಲೋವರ್ಗಳ ಸಂಖ್ಯೆಯನ್ನು ಟ್ವಿಟರ್ ಸಂಸ್ಥೆ ಸೀಮಿತಗೊಳಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್ನ ಸಿಇಒ ಪರಾಗ್ ಅಗರ್ವಾಲ್ಗೆ ಅವರು ಪತ್ರ ಬರೆದಿದ್ದಾರೆ.
ಡಿಸೆಂಬರ್ 27ರಂದು ರಾಹುಲ್ ಗಾಂಧಿ ಬರೆದ ಪತ್ರವನ್ನು ಉಲ್ಲೇಖಿಸಿ ಹಲವು ಮಾಧ್ಯಮಗಳು ಈ ಕುರಿತು ವರದಿ ಮಾಡಿವೆ. ಅದರಲ್ಲಿ ರಾಹುಲ್ ಗಾಂಧಿ ತಮ್ಮ ಆರೋಪಕ್ಕೆ ಪೂರಕ ಅಂಕಿಅಂಶಗಳನ್ನೂ ಒದಗಿಸಿದ್ದಾರೆ. ಮೊದಲಿಗೆ ರಾಹುಲ್ ಗಾಂಧಿಯವರಿಗೆ ಪ್ರತಿ ತಿಂಗಳು ಸುಮಾರು 2 ಲಕ್ಷ ಹೊಸಬರು ಟ್ವಿಟರ್ನಲ್ಲಿ ಫಾಲೋ ಮಾಡುತ್ತಿದ್ದರು. ಆದರೆ 2021ರ ಆಗಸ್ಟ್ ನಂತರ ಈ ಸಂಖ್ಯೆ ಕೇವಲ 2,500ರ ಆಸುಪಾಸಿನಲ್ಲಿದೆ. ಅರ್ಥಾತ್ ಸುಮಾರು 2,500 ಜನರು ಮಾತ್ರ ಪ್ರತಿ ತಿಂಗಳು ರಾಹುಲ್ ಗಾಂಧಿ ಖಾತೆಯನ್ನು ಹೊಸದಾಗಿ ಫಾಲೋ ಮಾಡುತ್ತಿದ್ದಾರೆ. ಅಲ್ಲದೇ ಕೆಲ ಸಮಯದಿಂದ ಟ್ವಿಟರ್ ಫಾಲೋವರ್ಗಳ ಸಂಖ್ಯೆ 19.5 ಮಿಲಿಯನ್ನಲ್ಲೇ ಸ್ಥಿರವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಇದನ್ನೂ ಓದಿ :
ಪರೇಶ್ ಅಗರವಾಲ್ಗೆ ಬರೆದ ಪತ್ರದಲ್ಲಿ ರಾಹುಲ್ ಗಾಂಧಿ, ‘‘ಭಾರತದಲ್ಲಿ ನಿರಂಕುಶಾಧಿಕಾರದ ಬೆಳವಣಿಗೆಗೆ ಟ್ವಿಟರ್ ಸಕ್ರಿಯವಾಗಿ ಸಹಾಯ ಮಾಡದಂತೆ ನೋಡಿಕೊಳ್ಳುವ ಅಗಾಧ ಜವಾಬ್ದಾರಿ ನಿಮ್ಮ ಮೇಲಿದೆ’’ ಎಂದು ಬರೆದಿದ್ದಾರೆ. ‘‘ಜಗತ್ತಿನಾದ್ಯಂತ ಉದಾರವಾದಿ ಪ್ರಜಾಪ್ರಭುತ್ವ ಮತ್ತು ನಿರಂಕುಶಾಧಿಕಾರದ ನಡುವಿನ ಸೈದ್ಧಾಂತಿಕ ಯುದ್ಧವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ರೂಪಿಸಲಾಗುತ್ತಿದೆ. ಇದು ಟ್ವಿಟರ್‌ನಂತಹ ದೊಡ್ಡ ಕಂಪನಿಗಳ ಮೇಲೆ ಬಹುದೊಡ್ಡ ಜವಾಬ್ದಾರಿ ಹೊರಿಸಿದೆ’’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ.
ಆಗಸ್ಟ್‌ನಲ್ಲಿ ರಾಹುಲ್ ಗಾಂಧಿ ಟ್ವಿಟರ್ ಖಾತೆಯನ್ನು ಅಮಾನತುಗೊಳಿಸಿದ್ದ ಟ್ವಿಟರ್ ಸಂಸ್ಥೆ: ಆಗಸ್ಟ್‌ನಲ್ಲಿ ದೆಹಲಿಯ ಅತ್ಯಾಚಾರ ಸಂತ್ರಸ್ತೆಯೋರ್ವರ ಕುಟುಂಬದ ಫೋಟೋವನ್ನು ಟ್ವೀಟ್ ಮಾಡಿದ ನಂತರ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ಸಂಕ್ಷಿಪ್ತವಾಗಿ ಅಮಾನತುಗೊಳಿಸಲಾಗಿತ್ತು. ರಾಹುಲ್ ಗಾಂಧಿಯವರ ಟ್ವಿಟ್ಟರ್ ಪೋಸ್ಟ್‌ಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು, ನಂತರ ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟರ್ನ ನಿಯಮಗಳ ಉಲ್ಲಂಘನೆಯನ್ನು ಉಲ್ಲೇಖಿಸಿ ಎಂಟು ದಿನಗಳ ಕಾಲ ಅವರ ಖಾತೆಯನ್ನು ಅಮಾನತುಗೊಳಿಸಲಾಗಿತ್ತು.
ಇದನ್ನೂ ಓದಿ :
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…